Friday, 20th April 2018

Recent News

11 months ago

ಕಸಾಯಿ ಖಾನೆಗೆ ಸಾಗಿಸುತ್ತಿದ್ದ 40 ಜಾನುವಾರುಗಳ ರಕ್ಷಣೆ

ಬೆಂಗಳೂರು: ಯಾರಿಗೂ ತಿಳಿಯದಂತೆ ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 40 ಜಾನುವಾರಗಳನ್ನು ನಗರದ ಹೊರವಲಯದ ನೆಲಮಂಗಲ ಬಳಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್‍ಪೇಟೆ ಬಳಿ ಲಾರಿಯಲ್ಲಿ ಜಾನುವಾರುಗಳನ್ನು ತುಮಕೂರು ಮಾರ್ಗವಾಗಿ ಬೆಂಗಳೂರು ನಗರಕ್ಕೆ ಸಾಗಿಸುತ್ತಿದ್ದ ವೇಳೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಅದರಲ್ಲಿದ್ದ 40 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಇನ್ನೂ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದು, ಉಳಿದ ಮೂವರನ್ನು ಪೊಲೀಸೆರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ […]

12 months ago

ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಮೇವಿನ ಬಣವೆ, 14 ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಊರ ಹೊರಗಡೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿಯ ಕೆನ್ನಾಲಿಗೆ ಗ್ರಾಮಕ್ಕೂ...