Sunday, 22nd April 2018

Recent News

1 hour ago

ಕೊಡಗು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ- `ಕೈ’ ಬಿಡಲು ಪದ್ಮಿನಿ ಪೊನ್ನಪ್ಪ ನಿರ್ಧಾರ

ಮಡಿಕೇರಿ: ಕೊಡಗು ಜಿಲ್ಲೆಯ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ವಿರಾಜಪೇಟೆ ಟಿಕೆಟ್ ಕೈ ತಪ್ಪಿದ್ದಕ್ಕೆ ರಾಜ್ಯ ಅರಣ್ಯ ನಿಗಮದ ಉಪಾಧ್ಯಕ್ಷೆಯಾಗಿದ್ದ ಪದ್ಮಿನಿ ಪೊನ್ನಪ್ಪ ಪಕ್ಷದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೈ ಅಭ್ಯರ್ಥಿ ಅರುಣ್ ಮಾಚಯ್ಯರನ್ನು ಸೋಲಿಸಲು ನಿರ್ಧರಿಸಿರುವ ಪದ್ಮಿನಿ ಪೊನ್ನಪ್ಪರನ್ನ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನೆಲೆಗಟ್ಟಿನ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿಸುವ ಸಾಧ್ಯತೆ ಇದೆ. ಸುಮಾರು 3 ದಶಕಗಳಿಂದ ಕಾಂಗ್ರೆಸ್‍ನಲ್ಲಿ ಸೇವೆ ಸಲ್ಲಿಸಿದ್ದ ಇವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡದಿದ್ದಕ್ಕೆ […]

4 days ago

ಸರ್ಕಾರಿ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ

ಮಡಿಕೇರಿ: ಸರ್ಕಾರಿ ಬಸ್ಸಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಈ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ. 10-15 ಪ್ರಯಾಣಿಕರಿದ್ದ ಬಸ್ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಇತ್ತ ಮಂಗಳೂರಿನಿಂದ ಮೈಸೂರು ಕಡೆ ಕೊಕೊ ಸಾಗಿಸುತ್ತಿದ್ದ ಲಾರಿ ಸಂಚರಿಸುತ್ತಿತ್ತು. ಈ ವೇಳೆ...

ಕೈ ಟಿಕೆಟ್‍ಗಾಗಿ ಕೋಟಿ ಕೋಟಿ ಹಣ ಕೇಳಿದ ನಾಯಕರ ಜಾತಕ ಬಿಡುಗಡೆ ಮಾಡ್ತೀವಿ: ಮುತ್ತಪ್ಪ ಸಹೋದರ ಮುದ್ದಪ್ಪ

6 days ago

ಮಡಿಕೇರಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಬೆನ್ನಲ್ಲೇ ಕೊಡಗು ಕಾಂಗ್ರೆಸ್‍ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಭಾನುವಾರ ರಾತ್ರಿ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಣೆ ಆದ ನಂತರ ಕೊಡಗು ಕಾಂಗ್ರೆಸ್ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಚಂದ್ರಮೌಳಿ...

5 ದಿನ ಪ್ರಧಾನಿ ಆದರೆ ಸಾಕು, ದೇಶವನ್ನು ಬದಲಾವಣೆ ಮಾಡುತ್ತೇನೆ: ಹುಚ್ಚ ವೆಂಕಟ್

2 weeks ago

ಮಡಿಕೇರಿ: ಈ ಬಾರಿಯ ವಿಧಾನಸಭಾ ಚುನಾವಣೆ ಮೂಲಕ ತಾನು ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ನಟ, ನಿರ್ಮಾಪಕ, ನಿರ್ದೇಶಕ ಹುಚ್ಚ ವೆಂಕಟ್ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಫೈರಿಂಗ್...

ವೇಗವಾಗಿ ಬಂದು ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆಯಿತು ಲಾರಿ – ಪಾಲಕನಿಗೆ ಗೇಟ್ ಬಡಿಯೋದನ್ನು ನೋಡಿ

2 weeks ago

ಮಡಿಕೇರಿ: ರಭಸದಿಂದ ಬಂದ ಲಾರಿಯೊಂದು ಅರಣ್ಯ ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆದು ಆ ಗೇಟ್ ಪಾಲಕನಿಗೆ ಬಡಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ ನಡೆದಿದೆ. ರಾಜಪ್ಪ ಗಂಭೀರವಾಗಿ ಗಾಯಗೊಂಡಿದ್ದ ಗೇಟ್ ಪಾಲಕ. ರಾಜಪ್ಪ ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿದ್ದು ಗೇಟ್...

ಮಡಿಕೇರಿಯಲ್ಲಿ ನೈತಿಕ ಪೊಲೀಸ್ ಗಿರಿ-ಅನ್ಯಕೋಮಿನ ಯುವಕನೊಂದಿಗೆ ಬಂದಿದ್ದಕ್ಕೆ ಥಳಿತ

2 weeks ago

-ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಡಿಕೇರಿ: ಹಿಂದೂ ಯುವತಿ ಜೊತೆಗೆ ಅನ್ಯಕೋಮಿನ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಅಂತಾ ಆರೋಪಿಸಿ ಸ್ಥಳೀಯರು ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೋರಂಗಾಲ ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳ...

ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ

3 weeks ago

ಮಡಿಕೇರಿ: ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಡಗು- ದಕ್ಷಿಣ ಕನ್ನಡದ ಗಡಿಯಲ್ಲಿರುವ ಕಲ್ಲುಗುಂಡಿ ಗ್ರಾಮದಲ್ಲಿ ಸೆರೆಹಿಡಿಯಲಾಗಿದೆ. ಗ್ರಾಮದ ಮಣಿ ಕುಮಾರ್ ಎಂಬುವವರ ಮನೆಯ ತೋಟದಲ್ಲಿ ಸುಮಾರು 14 ಆಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು. ಭಾರೀ ಗಾತ್ರದ ಹಾವನ್ನು...

ಖಾಸಗಿ ಬಸ್, ಜೀಪ್ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

3 weeks ago

ಮಡಿಕೇರಿ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಜೀಪ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೋಪ್ಪ ಗ್ರಾಮದಲ್ಲಿ ನಡೆದಿದೆ. ಶ್ರೀ ಉಮಾಮಹೇಶ್ವರಿ ದೇವಾಲಯದ ಬಳಿ ಈ ಅಪಘಾತ ಸಂಭವಿಸಿದ್ದು,...