Monday, 23rd April 2018

Recent News

10 months ago

ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ಅನಂತ್ ಕುಮಾರ್, ವೆಂಕಯ್ಯ ನಾಯ್ಡು ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಮಿತ್ ಷಾ, ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ […]

10 months ago

ರಾಷ್ಟ್ರಪತಿ ಹುದ್ದೆಗೆ ಡಾ. ವೀರೇಂದ್ರ ಹೆಗ್ಗಡೆ ಹೆಸರು – ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ

ನವದೆಹಲಿ: ಮುಂದಿನ ತಿಂಗಳು ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಒಕ್ಕೂಟ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿರುವ ಬೆನ್ನಲ್ಲೇ ಕರ್ನಾಟಕದವರಿಗೆ ಈ ಪಟ್ಟ ಒಲಿಯಬಹುದು ಅನ್ನೋ ಸುದ್ದಿ ಹಬ್ಬಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಎನ್‍ಡಿಎ ತನ್ನ ಅಭ್ಯರ್ಥಿಯಾಗಿ ಪರಿಗಣಿಸಬಹುದು ಅನ್ನೋ ಮಾತು ಕೇಳಿಬಂದಿದೆ. ಭಾನುವಾರವಷ್ಟೇ...