Saturday, 23rd June 2018

Recent News

1 year ago

ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

ಮಂಡ್ಯ: ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗ್ರಾಮದ ವರದರಾಜು ಮತ್ತು ಸುಮಿತ್ರ ದಂಪತಿಯ ಪುತ್ರ ಜೀವನ್ ಮೃತ ದುರ್ದೈವಿ. ಬಾಲಕ ಜೀವನ್ ತನ್ನ ಮನೆ ಬಳಿ ಆಟವಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ತಮ್ಮ ಐದು ವರ್ಷದ ಮಗನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

1 year ago

ಬಳ್ಳಾರಿಯಲ್ಲಿ 42 ಡಿಗ್ರಿ ತಲುಪಿದ ಉಷ್ಣಾಂಶ: ಪೊಲೀಸ್ ನಾಯಿಗಳಿಗೆ ವಿಶೇಷ ವ್ಯವಸ್ಥೆ- ಏನದು? ಈ ಸುದ್ದಿ ಓದಿ

ಬಳ್ಳಾರಿ: ಗಡಿನಾಡು ಬಳ್ಳಾರಿ ಅಂದ್ರೆ ಸಾಕು ಸುಡುಬಿಸಿಲು ನೆನಪಾಗೋದು ಸಹಜ. ಈ ಬಾರಿಯ ಬಿಸಿಲಿನ ರುದ್ರನರ್ತನಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಬೇಸಿಗೆಯ ಆರಂಭದ ದಿನಗಳಲ್ಲೇ ಗಣಿ ನಾಡಿನ ತಾಪಮಾನ 42 ಡಿಗ್ರಿ ತಲುಪಿದೆ. ಹೀಗಾಗಿ ಪ್ರಾಣಿ ಪಕ್ಷಿಗಳ ಸ್ಥಿತಿ ಹೇಳತೀರದಾಗಿದೆ. ಆದ್ರೆ ಬಳ್ಳಾರಿ ಪೊಲೀಸ್ ಇಲಾಖೆ ತಾಪಮಾನ ಹೆಚ್ಚಾಗುತ್ತಿದ್ದಂತೆ ಇಲಾಖೆಯ ಶ್ವಾನಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ....