Sunday, 24th September 2017

Recent News

4 weeks ago

ಸಹೋದರನ ಜೊತೆ ಅತ್ತಿಗೆಯನ್ನು ಕೊಂದ ಅಪ್ರಾಪ್ತ ನಾದಿನಿ ಅರೆಸ್ಟ್: ಈಗ ಪೊಲೀಸರ ವಿರುದ್ಧ ದೂರು

ಲಕ್ನೋ: ಸಹೋದರನ ಜೊತೆ ಸೇರಿಕೊಂಡು ಅತ್ತಿಗೆಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಸಹೋದರಿಯನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಆದರೆ ಈಗ ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧವೇ ದೂರು ದಾಖಲಾಗಿದೆ. ಬಂಧನಕ್ಕೆ ಒಳಗಾದವಳು ಈಗ ಅಪ್ರಾಪ್ತೆ ಹೌದೋ ಅಲ್ಲವೋ ಎನ್ನುವ ಬಗ್ಗೆ ವಿವಾದ ಎದ್ದಿದ್ದು ಪೊಲೀಸರು ಆಕೆ ಅಪ್ರಾಪ್ತೆಯಲ್ಲ ಎಂದು ಹೇಳಿದರೆ, ಆರ್‍ಟಿಐ ಕಾರ್ಯಕರ್ತರೊಬ್ಬರು ಆಕೆ ಅಪ್ರಾಪ್ತೆ ಎಂದು ಹೇಳಿ ಪೊಲೀಸರ ವಿರುದ್ಧವೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು […]

1 month ago

ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್ ಪ್ರೆಸ್, 70 ಮಂದಿಗೆ ಗಾಯ

ಲಕ್ನೋ: ಉತ್ಕಲ್ ರೈಲು ದುರಂತದ ನೆನಪು ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 70 ಜನ ಗಾಯಗೊಂಡಿರುವ ಘಟನೆ ಮಂಗಳವಾರ ಅವೌರೇಯಾ ಜಿಲ್ಲೆಯಲ್ಲಿ ನಡೆದಿದೆ. ಮಾನವ ರಹಿತ ಸಿಗ್ನಲ್ ನಲ್ಲಿ ಪಲ್ಟಿಯಾಗಿದ್ದ ಮರಳಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು...

ನಿಗೂಢವಾಗಿ ಸಾವನಪ್ಪಿದ ಅಧಿಕಾರಿ ಅನುರಾಗ್ ತಿವಾರಿ ಕೊನೆ ಕ್ಷಣದ ವಿಡಿಯೋ ನೋಡಿ

4 months ago

ಬೆಂಗಳೂರು: ಉತ್ತರಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟ ಕರ್ನಾಟಕದ ಐಎಎಸ್ ಅಧಿಕಾರು ಅನುರಾಗ್ ತಿವಾರಿ ಅವರ ಕೊನೆಯ ಕ್ಷಣದ ವಿಡಿಯೋವೊಂದು ಲಭ್ಯವಾಗಿದೆ. ಉತ್ತರಪ್ರದೇಶ ರಾಜಧಾನಿ ಲಕ್ನೋದ ಹಜರತ್‍ಗಂಜ್‍ನಲ್ಲಿರುವ ಆರ್ಯನ್ ಹೋಟೆಲ್‍ಗೆ ಎಂಟ್ರಿ ಕೊಡ್ತಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ದೃಶ್ಯದಲ್ಲಿ ಗ್ಲಾಸ್ ಡೋರ್‍ನ್ನು ತಳ್ಳಿಕೊಂಡು...

ಸಾಮಾನ್ಯ ಕೈದಿಗಳಿಗೆ ನೀಡೋ ಆಹಾರವನ್ನೇ ಡಾನ್‍ಗಳಿಗೂ ನೀಡಿ: ಯೋಗಿ ಆದಿತ್ಯನಾಥ್

5 months ago

ಲಕ್ನೋ: ಉತ್ತರ ಪ್ರದೇಶದ ಜೈಲಿನಲ್ಲಿ ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ರಾಜಕೀಯ ನಾಯಕರ ಜೊತೆ ನಂಟುಹೊಂದಿರುವ ಡಾನ್‍ಗಳಿಗೂ ನೀಡಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಇಲಾಖೆಯ ಅಧಿಕಾರಿಗಳ ಜೊತೆ ಬುಧವಾರ ರಾತ್ರಿ ಯೋಗಿ ಸಭೆ ನಡೆಸಿದರು....

ರೈತರಿಗೆ, ವಿದ್ಯಾರ್ಥಿಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು: ಯೋಗಿಯಿಂದ ಎರಡನೇ ಮಹತ್ವದ ಆದೇಶ

6 months ago

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ 24 ಗಂಟೆ ಮತ್ತು ಗ್ರಾಮೀಣ ಭಾಗದಲ್ಲಿ 18 ಗಂಟೆ ನಿರಂತರ ವಿದ್ಯುತ್ ನೀಡುವಂತೆ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಮೊದಲ ಕ್ಯಾಬಿನೆಟ್‍ನಲ್ಲಿ ರೈತರ ಸಾಲಮನ್ನಾ ಮಾಡಿದ್ದ ಯೋಗಿ ಸರ್ಕಾರ...

ನಾನು ನಿಮಗೆ ವೋಟ್ ಹಾಕಿದ್ದೇನೆ, ಪ್ಲೀಸ್ ತ್ರಿವಳಿ ತಲಾಖ್ ನಿಷೇಧಿಸಿ: ಮೋದಿಗೆ ಗರ್ಭಿಣಿಯಿಂದ ಪತ್ರ

6 months ago

ಲಕ್ನೋ: ತ್ರಿವಳಿ ತಲಾಖ್ ನಿಷೇಧಿಸಿ ಎಂದು ಉತ್ತರ ಪ್ರದೇಶದ ಮೂರು ತಿಂಗಳ ಗರ್ಭಿಣಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ತ್ರಿವಳಿ ತಲಾಖ್ ನಿಷೇಧಿಸಲು ನೀವು ಮುಂದಾಗಿದ್ದಕ್ಕೆ ನಾನು ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತವನ್ನು ಹಾಕಿದ್ದೇನೆ. ಹೀಗಾಗಿ ತ್ರಿವಳಿ ತಲಾಖ್ ನಿಷೇಧಿಸಿ...

ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

6 months ago

ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್‍ಸೈಟ್‍ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್‍ಗೆ ಬಂದಿದೆಯೇ? ಈ ರೀತಿಯ ಮೆಸೇಜ್ ನಿಮ್ಮ ವಾಟ್ಸಪ್‍ಗೆ ಬಂದಿದ್ದರೆ...

ಮಠಾಧೀಶರೊಬ್ಬರು 30 ಕೋಟಿ ಜನಸಂಖ್ಯೆ ರಾಜ್ಯವನ್ನ ಆಳುತ್ತಿದ್ದಾರೆ, ಎಲ್ಲಿಗೆ ಬಂತು ದೇಶ: ಎಚ್‍ಡಿಡಿ ಪ್ರಶ್ನೆ

6 months ago

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ರಣಕಹಳೆ ಊದಿರುವ ಜೆಡಿಎಸ್ ಇಂದು ಸ್ವಾಭಿಮಾನಿ ಸಮಾನತೆ ಸಮಾವೇಶ ನಡೆಸಿತು. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಎಚ್‍ಡಿ ರೇವಣ್ಣ ಸೇರಿದಂತೆ ಜೆಡಿಎಸ್ ಪಕ್ಷ ಮುಖಂಡರು ಭಾಗವಹಿಸಿದ್ದರು. ಸಾವಿರಾರು ಕಾರ್ಯಕರ್ತರು...