Friday, 25th May 2018

Recent News

ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಚಿಕ್ಕಬಳ್ಳಾಪುರ: ಮರಕ್ಕೆ ನೇಣು ಬಿಗಿದುಕೊಂಡು ಇಂಜಿನೀಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿಯ ಹೊರವಲಯದ ಕಾಡುಮಲ್ಲೇಶ್ವರ ಬೆಟ್ಟದಲ್ಲಿ ನಡೆದಿದೆ.

ಚಿಂತಾಮಣಿ ನಗರದ ಎನ್.ಆರ್.ಬಡವಾಣೆಯ ನಿವಾಸಿ ಪವನ್ ಕುಮಾರ್ ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಪವನ್ ಎರಡು ವರ್ಷಗಳ ಹಿಂದೆ ಮದುವೆ ಆಗಿದ್ದರು. ಆದ್ರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ತವರು ಮನೆ ಸೇರಿದ್ದರು ಎಂದು ತಿಳಿದು ಬಂದಿದೆ. ಪತ್ನಿ ಅನಾರೋಗ್ಯದಿಂದ ತವರು ಮನೆ ಸೇರಿಕೊಂಡಿದ್ದರಿಂದ ಪವನ್ ಕುಮಾರ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಾನಸಿಕ ಖಿನ್ನತೆಯಿಂದಾಗ ನಿರ್ಜನ ಪ್ರದೇಶವಾದ ಕಾಡು ಮಲ್ಲೇಶ್ವರ ಬೆಟ್ಟಕ್ಕೆ ತೆರಳಿ ಮರಕ್ಕೆ ನೇಣು ಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *