Thursday, 18th January 2018

Recent News

ಮಧ್ಯಾಹ್ನ ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿದಳು ಕಾವೇರಿ

ಮಡಿಕೇರಿ: ಕರುನಾಡ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿತ್ತು. ಪ್ರತಿವರ್ಷ ಭಕ್ತರಿಗೆ ದರ್ಶನ ನೀಡುವ ಕಾವೇರಿ ತಾಯಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ತೀರ್ಥರೂಪಿಣಿಯಾಗಿ ಒಲಿದಳು.

ಪುರೋಹಿತರು ಮಹಾ ಸಂಕಲ್ಪ ಪೂಜೆ, ಮಹಾಪೂಜೆ ಸಹಸ್ರನಾಮಾರ್ಚನೆ, ಮಹಾಮಂಗಳಾರತಿ ಮಾಡುತ್ತಿದ್ದಂತೆ ತೀರ್ಥಕುಂಡಿಕೆಯಿಂದ ಪವಿತ್ರ ಜಲ ಉಕ್ಕಿಬಂತು. ಬ್ರಹ್ಮ ಕುಂಡಿಕೆಯಿಂದ ತೀರ್ಥಸ್ವರೂಪಿಣಿಯಾಗಿ ಉಕ್ಕಿಬಂದ ಕಾವೇರಿಯನ್ನು ಕಣ್ತುಂಬಿಕೊಂಡ ಭಕ್ತರು “ಜೈ ಜೈ ಮಾತಾ ಕಾವೇರಿ” ಎಂದು ಉದ್ಘಾರ ಮಾಡುತ್ತಾ ಭಾವಪರವಶರಾದರು.

ವಿಶೇಷಾಗಿ ಕಾವೇರಿ ತನ್ನ ಸಹೋದರಿ ಗಂಗೆಯೊಂದಿಗೆ ಸೇರಿ ತುಲಾ ಸಂಕ್ರಮಣದ ಈ ಕಾಲದಲ್ಲಿ ತೀರ್ಥಸ್ವರೂಪಿಣಿಯಾಗಿ ಉಕ್ಕಿಬರುವುದರಿಂದ ಈ ಸಮಯದಲ್ಲಿ ತಲಕಾವೇರಿಯಲ್ಲಿ ಪುಣ್ಯಸ್ನಾನಮಾಡಿ ತೀರ್ಥ ಸಂಗ್ರಹಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಮನೆಮಾಡಿದೆ.

ಕಾವೇರಿ ತುಲಾ ಸಂಕ್ರಮಣ ಇನ್ನೂ ಒಂದು ತಿಂಗಳು ನಡೆಯಲಿದ್ದು, ಈ ತಿಂಗಳ ಅವಧಿಯಲ್ಲಿ ಇಲ್ಲಿಗೆ ಬಂದು ಪವಿತ್ರ ಸ್ನಾನಮಾಡಿ ತೀರ್ಥ ಸ್ವೀಕರಿಸಿದರೆ ಪುಣ್ಯ ಪ್ರಾಪ್ತಿಯಾಗುವುದೆಂಬ ನಂಬಿಕೆಯಿದೆ.

Leave a Reply

Your email address will not be published. Required fields are marked *