ಪ್ರಧಾನಿ ಮೋದಿ ತಮ್ಮ ಸಭೆಯಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿದ್ದು ಯಾಕೆ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಸಭೆಗಳಲ್ಲಿ ಅಧಿಕಾರಿಗಳ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.

ಸಭೆ ನಡೆಸುವ ವೇಳೆ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗುತ್ತಿರುವ ಹಿನ್ನೆಲೆಯಲ್ಲಿ ಮೊಬೈಲ್ ಬಳಕೆಯನ್ನು ಮೋದಿ ನಿಷೇಧಿಸಿದ್ದಾರೆ.

ನಾಗರಿಕ ಸೇವಾ ದಿನಾಚರಣೆ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಈಗ ಗಮನಿಸಿದ್ದೇನೆ. ಈಗ ಜಿಲ್ಲೆಗಳ ಅಧಿಕಾರಿಗಳು ಹೆಚ್ಚು ಸಮಯವನ್ನು ಸಾಮಾಜಿಕ ಜಾಲತಾಣದಲ್ಲಿ ಕಳೆಯುತ್ತಿದ್ದಾರೆ. ಸಭೆ ನಡೆಯುತ್ತಿರುವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗುತ್ತಿದ್ದಾರೆ. ಹೀಗಾಗಿ ನನ್ನ ಸಭೆಯಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳನ್ನು ಅಧಿಕಾರಿಗಳು ಜನರ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಿಗೆ ಬಳಸಬೇಕೇ ವಿನಾ: ಕೆಲಸದ ಅವಧಿಯಲ್ಲಿ ಸ್ವಯಂ ಪ್ರಶಂಸೆಗಾಗಿ ವೈಯಕ್ತಿಕ ವಿಚಾರಗಳಿಗೆ ಬಳಕೆ ಮಾಡಬಾರದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮೋದಿಗೆ ಜೀವ ಬೆದರಿಕೆ ಇದ್ರೆ ಸಾಯಲಿ ಬಿಡಿ: ಬಸವರಾಜ ರಾಯರೆಡ್ಡಿ ಉಡಾಫೆಯ ಹೇಳಿಕೆ

You might also like More from author

Leave A Reply

Your email address will not be published.

badge