Monday, 25th June 2018

Recent News

ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಯುವಕ ವಿದ್ವತ್ ನನ್ನು ನಟ ಪುನೀತ್ ರಾಜ್ ಕುಮಾರ್ ಇಂದು ಭೇಟಿ ಮಾಡಿದ್ದಾರೆ.

ನಗರದ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ನಟ ಪುನೀತ್ ಅವರು ವಿದ್ವತ್ ಆರೋಗ್ಯ ವಿಚಾರಿಸಿದ್ದು, ಈ ವೇಳೆ ಅವರು ಕಣ್ಣೀರು ಹಾಕಿದ್ದಾರೆ. ಹಲ್ಲೆಗೊಳಗಾದ ವಿದ್ವತ್, ರಾಘವೇಂದ್ರ ರಾಜ್‍ಕುಮಾರ್ ಪುತ್ರನ ಸ್ನೇಹಿತರಾಗಿದ್ದಾರೆ. ಇದನ್ನೂ ಓದಿ: ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ ಡಿಟೇಲ್ ಇಲ್ಲಿದೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪುನೀತ್, ಹಲ್ಲೆಗೊಳಗಾದ ವಿದ್ವತ್ ಫ್ಯಾಮಿಲಿ ಫ್ರೆಂಡ್. ಆತನನ್ನು ನಾನು ಚಿಕ್ಕಂದಿನಿಂದಲೇ ನೋಡಿದ್ದೀನಿ. ಆತನು ನನಗೆ ಪರಿಚಯ. ಸದ್ಯ ಆತ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾನೆ. ವಿದ್ವತ್ ನನ್ನ ತಮ್ಮನ ಹಾಗೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ತಪ್ಪಿತಸ್ಥಿರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ- ಸಚಿವ ಜಾರ್ಜ್ ಪ್ರಶ್ನೆ

ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ಇದನ್ನೂ ಓದಿ: ನಲಪಾಡ್ ಗೆ ಋಣ ಸಂದಾಯ – ಕಬ್ಬನ್ ಪಾರ್ಕ್ ಪೊಲೀಸರ ಮತ್ತೊಂದು ಅವಾಂತರ ಬಟಾಬಯಲು!

ಸದ್ಯ ವಿದ್ವತ್ ಮೂಗಿನ ಹೊಳ್ಳೆಗಳು ಒಡೆದಿದ್ದು, ಮೂಗು ಫ್ರಾಕ್ಚರ್ ಆಗಿದೆ. ಬಲಭಾಗದ 5 ಪಕ್ಕೆಲುಬುಗಳು ಮುರಿದಿದ್ದು, ಎಡಭಾಗದ 4 ಪಕ್ಕೆಲುಬುಗಳು ಮುರಿದಿವೆ. ಆದ್ದರಿಂದ ವಿದ್ವತ್ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *