Wednesday, 20th June 2018

ಮಂಡ್ಯ: ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೃಹಿಣಿ

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಚಾವಡಘಟ್ಟ ಗ್ರಾಮದಲ್ಲಿ ನಡೆದಿದೆ.

32 ವರ್ಷದ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಚಾವಡಘಟ್ಟ ಗ್ರಾಮದ ಕಪನೀಗೌಡ, ಚಿಕ್ಕಮ್ಮ ದಂಪತಿಗಳ ಪುತ್ರಿಯಾಗಿರುವ ಅನ್ನಪೂರ್ಣರನ್ನು ಹೆಮ್ಮಡಹಳ್ಳಿ ಗ್ರಾಮದ ಮೋಹನ್ ಕುಮಾರ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಅನ್ನಪೂರ್ಣ ಚಾವಡಘಟ್ಟ ಗ್ರಾಮದ ಬಳಿ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೂವರು ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Leave a Reply

Your email address will not be published. Required fields are marked *