Thursday, 21st June 2018

Recent News

3 ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ- 7ರ ಬಾಲಕಿ ಪಾರು

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಇಂಡಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ಇಂಡಿ ತಾಲೂಕಿನ ಸಾತಪುರ ಗ್ರಾಮದವರಾದ ಲಕ್ಷ್ಮೀ ಪ್ರಕಾಶ ಬೂದಿಹಾಳ(35), 3 ವರ್ಷದ ಮಗು ಬೀರಪ್ಪ ಹಾಗೂ 1 ವರ್ಷದ ಮಗು ಅಂಕುಶ ಮೃತ ದುರ್ದೈವಿಗಳಾಗಿದ್ದಾರೆ. ಸೋಮವಾರ ತಡರಾತ್ರಿ ತಾಯಿ, ಇಬ್ಬರು ಮಕ್ಕಳೊಂದಿಗೆ ರೈಲ್ವೇ ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಯಲ್ಲಿ ಅದೃಷ್ಟವಶಾತ್ 7 ವರ್ಷದ ಬಾಲಕಿ ದಾನಮ್ಮ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಬಾಲಕಿಯನ್ನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *