– ಎಫ್ಡಿಎ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಅಮಾನತಿಗೆ ಸೂಚನೆ
ಶಿವಮೊಗ್ಗ : ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಗಣಿಗಾರಿಕೆಗಳಿಗೆ ತತ್ ಕ್ಷಣ ಕಡಿವಾಣ ಹಾಕುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ನಂತರವೂ ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ. ಎಲ್ಲ ಅಕ್ರಮ ಗಣಿಗಾರಿಕೆಗಳು ಕೂಡಲೇ ನಿಲ್ಲಬೇಕು. ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು. ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುಮತಿ ನೀಡಬೇಕು ಎಂದರು.
Advertisement
Advertisement
ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಗಣಿಗಾರಿಕೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೇ ಹಲವು ಬಾರಿ ಗಣಿಗಾರಿಕೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಇದರ ನಡುವೆಯೂ ಅಲ್ಲೊಂದು ಇಲ್ಲೊಂದು ಕದ್ದುಮುಚ್ಚಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಇದಕ್ಕೂ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.
Advertisement
Advertisement
ಅಮಾನತಿಗೆ ಸೂಚನೆ: ಕೆಪಿಎಸ್ಸಿ ಎಫ್ ಡಿಎ ಪ್ರಶ್ನೆ ಪತ್ರಿಕೆ ಪರೀಕ್ಷೆಗು ಮುನ್ನವೇ ಬಹಿರಂಗಗೊಂಡಿರುವ ವಿಚಾರ ಅಕ್ಷಮ್ಯ ಅಪರಾಧ. ಈ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ಬಂಧನವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದನ್ನೂ ಓದಿ: 1 ಪೇಪರ್ಗೆ 10 ಲಕ್ಷ ರೂ. ಡೀಲ್ – ಕೆಪಿಎಸ್ಸಿ ಕಚೇರಿಯಿಂದಲೇ ಎಫ್ಡಿಎ ಪ್ರಶ್ನೆ ಪತ್ರಿಕೆ ಲೀಕ್