ಬೆಂಗಳೂರು: ಕೊರೊನಾ ವಿಚಾರದಲ್ಲಿ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಹುಟ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಕೊರೊನಾ ಬಿಗಿ ನಿಯಮಗಳ ಜಾರಿಗೆ ಬಿಬಿಎಂಪಿಯಿಂದ ಪ್ರಸ್ತಾವನೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾರ್ಕ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡುವುದು, ಥೀಯೇಟರ್ ಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡುವುದು. ವಿವಾಹ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಕ್ರಮ ವಹಿಸುವ ಅಗತ್ಯವಿದೆ ಎಂದು ಮಂಜುನಾಥ್ ಪ್ರಸಾದ್ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಇದನ್ನೂ ಓದಿ: ಥೀಯೇಟರ್ಗಳ ಸಾಮರ್ಥ್ಯ ಶೇ.50ಕ್ಕೆ ಇಳಿಸಿ- ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ
Advertisement
Advertisement
ಇದಕ್ಕೆ ಸಿಎಂ ಕೆಂಡಾಮಂಡಲವಾಗಿದ್ದು, ಅನಗತ್ಯ ಆತಂಕ ಹುಟ್ಟಿಸೋದು ಯಾಕೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ನಿಯಮಗಳ ಜಾರಿ ಬಗ್ಗೆ ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ಸಭೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೂ ಕೊರೊನಾ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಖುದ್ದು ಪ್ರಧಾನಿಯವರೇ ಜನರಲ್ಲಿ ಆತಂಕ ಹುಟ್ಟಿಸೋದು ಬೇಡ ಎಂದಿದ್ದಾರೆ. ಈ ಮಧ್ಯೆ ಅನಗತ್ಯ ಹೇಳಿಕೆ ಯಾಕೆ ಕೊಡಬೇಕಿತ್ತು ಎಂದು ಆಯುಕ್ತರಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
Advertisement
“ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ” : ರಾಜ್ಯದ ಸಮಸ್ತ ನಾಗರಿಕರಲ್ಲಿ ಮುಖ್ಯಮಂತ್ರಿ @BSYBJP ರವರ ಮನವಿ.#KarnatakaFightsCorona pic.twitter.com/LbQBfOAl2u
— CM of Karnataka (@CMofKarnataka) March 19, 2021
ಇನ್ನೊಂದು ವಾರ ಪರಿಸ್ಥಿತಿ ಅವಲೋಕನ ಮಾಡುವುದಾಗಿ ನಿರ್ಧರಿಸಲಾಗಿದೆ. ಪ್ರಸ್ತಾವನೆ ಕೊಟ್ಟ ಮೇಲೆ ತಜ್ಞರು ಪರಿಸ್ಥಿತಿ ಅವಲೋಕಿಸಿ ವರದಿ ನೀಡುತ್ತಾರೆ. ಅದಕ್ಕೂ ಮುನ್ನ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟು ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನ ಬೇಡ. ಏನೇ ಇದ್ದರೂ ತಜ್ಞರ ಜೊತೆ ಚರ್ಚಿಸಿ, ತೀರ್ಮಾನಿಸಲಾಗುತ್ತದೆ. ಅನಗತ್ಯ ಆತಂಕ ಹುಟ್ಟಿಸಿ ಜನರನ್ನು ಭೀತಿಗೆ ತಳ್ಳುವುದು ಬೇಡ ಎಂದು ಸಿಎಂ ತಾಕೀತು ಮಾಡಿದ್ದಾರೆ.