ಮಡಿಕೇರಿ: ಸರ್ಕಾರದ ಆಶಯವನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚಿಸಿದ್ದಾರೆ.
Advertisement
ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ದೇವಾಲಯಗಳ ಅನುದಾನದ ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ಆಡಿಟ್ ಮಾಡಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ಸಚಿವರು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಶ್ರೀ ಭಗಂಢೇಶ್ವರ, ಶ್ರೀ ಓಂಕಾರೇಶ್ವರ, ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯ ಸೇರಿ 3 “ಎ” ದರ್ಜೆಯ ದೇವಾಲಯಗಳಿವೆ. ಹಾಗೂ 4 ಸಿ ದರ್ಜೆಯ ದೇವಾಲಯಗಳು ಜಿಲ್ಲೆಯಲ್ಲಿ ಇವೆ. ಅವುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಕಾಮಗಾರಿಗಳಲ್ಲಿ ವಿಳಂಬವಾಗಬಾರದು ಎಂದು ಸಚಿವರು ಸೂಚಿಸಿದರು.
Advertisement
Advertisement
ರಾಜರ ಗದ್ದುಗೆ ಜಾಗಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಅಲ್ಲಿರುವ ಜನರಿಗೆ ಬದಲಿ ಸೂಕ್ತ ಜಾಗ ಗುರುತಿಸಿ ಒತ್ತುವರಿ ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ತಹಶೀಲ್ದಾರರಿಗೆ ಸಚಿವರು ನಿರ್ದೇಶನ ನೀಡಿದರು.
Advertisement
ಭಗಂಡೇಶ್ವರ, ತಲಕಾವೇರಿ ಪುಣ್ಯಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ವಿಶೇಷ ಪೂಜೆhttps://t.co/WpVPsrgnjP#SrinivasPoojary #Kodagu #KannadaNews
— PublicTV (@publictvnews) April 5, 2021