ಚೆನ್ನೈ: ಅಪ್ಪ-ಮಗನನ್ನು ಹಿಂಸಿಸಿ ಕೊಂದ ತಮಿಳುನಾಡಿನ ನಾಲ್ವರು ಪೊಲೀಸರನ್ನು ಸಿಬಿ-ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಲಾಕ್ಡೌನ್ ಉಲ್ಲಂಘನೆ ಮಾಡಿದ್ದಾರೆ ಎಂಬ ಕ್ಷುಲಕ ಕಾರಣಕ್ಕೆ ಅಪ್ಪ-ಮತ್ತು ಮಗನ್ನು ಠಾಣೆಗೆ ಎಳೆತಂದ ಪೊಲೀಸರು ಸಾಯುವವರೆಗೂ ಹಲ್ಲೆ ಮಾಡಿದ್ದರು. ಈ ಹಲ್ಲೆ ಮಾಡಿದ ಇನ್ಸ್ ಪೆಕ್ಟರ್ ಶ್ರೀಧರ್, ಸಬ್ ಇನ್ಸ್ ಪೆಕ್ಟರ್ ಗಳಾದ ರಘು ಗಣೇಶ್ ಮತ್ತು ಬಾಲಕೃಷ್ಣನ್ ಹಾಗೂ ಕಾನ್ಸ್ಟೆಬಲ್ ಮುರುಗನ್ ಅವರನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
Advertisement
Advertisement
ಲಾಕ್ಡೌನ್ ಅವದಿಗೂ ಮೀರಿ ಮೊಬೈಲ್ ಶಾಪ್ ಓಪನ್ ಮಾಡಿದ್ದಾರೆ ಎಂಬ ಕಾರಣಕ್ಕೆ ಠಾಣೆಗೆ ಅಪ್ಪ ಜಯರಾಜ್ ಮತ್ತು ಮಗ ಬೆನಿಕ್ಸ್ ಅನ್ನು ಕರೆತಂದಿದ್ದ ಪೊಲೀಸರು, ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಪೊಲೀಸರ ಈ ಕ್ರೂರ ಕೃತ್ಯಕ್ಕೆ ಇಡೀ ದೇಶದಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ನಟ ಕಮಲ್ ಹಾಸನ್ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಡ ಕೂಡ ಹಾಕಿದ್ದರು.
Advertisement
Advertisement
ಇದರ ಜೊತೆಗೆ ಜೂನ್ 19ರಂದು ಘಟನೆ ನಡೆದಾಗ ಸಾಥನ್ಕುಲಂ ಪೊಲೀಸ್ ಠಾಣೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಕೂಡ ಮಾಡಲಾಗಿದೆ. ಇದರಿಂದ ಅನುಮಾನಗೊಂಡ ಮದ್ರಾಸ್ ಹೈಕೋರ್ಟ್ ಸರಿಯಾಗಿ ತನಿಖೆ ಮಾಡುವಂತೆ ಜೊತೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತ್ತು. ಈಗ ಸಿಐಡಿ ತಂಡ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅರೆಸ್ಟ್ ಮಾಡಿ ತನಿಖೆ ಮಾಡುತ್ತಿದೆ.
ಜೂನ್ 19ರಂದು ಮೊಬೈಲ್ ಅಂಗಡಿಯನ್ನು ನೀಡಿರುವ ಅವಧಿಗೂ ಹೆಚ್ಚು ಕಾಲ ತೆರೆದಿದ್ದಾರೆ ಎಂದು, ಜಯರಾಜ್ ಮತ್ತು ಜೆ ಬೆನಿಕ್ಸ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈ ವೇಳೆ ಅವರನ್ನು ಕೋರ್ಟಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಮ್ಯಾಜಿಸ್ಟ್ರೇಟ್ ಬಿ ಸರವಣ ಅವರನ್ನು ವಿಚಾರಣೆ ಮಾಡುವಂತೆ ಅದೇಶ ಮಾಡಿದ್ದರು. ಈ ವೇಳೆ ಅವರನ್ನು ಠಾಣೆಗೆ ಕರೆದುಕೊಂಡು ಬಂದ ಪೊಲೀಸರು ಅಪ್ಪ-ಮಗನ ಮೇಲೆ ಹಲ್ಲೆ ಮಾಡಿದ್ದರು.
ಪೊಲೀಸರ ಏಟನ್ನು ತಡೆಯಲಾಗದ ಬೆನಿಕ್ಸ್ ಅಲ್ಲೇ ಕುಸಿದು ಬಿದ್ದಿದ್ದರು, ಅವರನ್ನು ಜೂನ್ 22ರ ಸಂಜೆ ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಂದೇ ರಾತ್ರಿ ಆತ ಮೃತಪಟ್ಟಿದ್ದ. ಇದಾದ ನಂತರ ಅವರ ತಂದೆ ಜಯರಾಜ್ ಕೂಡ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಜೂನ್ 23ರ ಬೆಳಗ್ಗೆ ಅದೇ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಅವರು ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಡಿಎಂಕೆ ಪಕ್ಷದ ಸಂಸದ ಕನಿಮೋಜಿ ಅವರು ಈ ವಿಚಾರವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್.ಎಚ್.ಆರ್.ಸಿ) ಪತ್ರ ಬರೆದಿದ್ದು ಇದರಲ್ಲಿ, ಪೊಲೀಸ್ ಅಧಿಕಾರಿಗಳು ಬೆನ್ನಿಕ್ಸ್ ಅವರ ಗುದದ್ವಾರಕ್ಕೆ ಲಾಠಿ ಹಾಕಿದ್ದಾರೆ. ಈ ವೇಳೆ ರಕ್ತಸ್ರಾವ ಉಂಟಾಗಿ ಅವರು ಸಾವನ್ನಪ್ಪಿದ್ದಾರೆ ಮತ್ತು ಪೊಲೀಸ್ ಅಧಿಕಾರಿಗಳು ಜಯರಾಜ್ ಅವರನ್ನು ಮಾರಣಾಂತಿಕವಾಗಿ ಥಳಿಸಿದ್ದಾರೆ. ಪೊಲೀಸರು ಶೂಳಿಂದ ಜಯರಾಜ್ ಅವರ ಎದೆಗೆ ಮೇಲೆ ಅನೇಕ ಬಾರಿ ಒದ್ದಿರುವ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದರು.