Connect with us

Corona

ಅಯೋಧ್ಯೆ ರಾಮಮಂದಿರದ ಪ್ರಮುಖ ಅರ್ಚಕ, 16 ಮಂದಿ ಭದ್ರತಾ ಸಿಬ್ಬಂದಿಗೆ ಕೊರೊನಾ

Published

on

ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಮುಖ ಅರ್ಚಕ ಹಾಗೂ 16 ಮಂದಿ ಭದ್ರತಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಶಿಷ್ಯ ಪ್ರದೀಪ್ ದಾಸ್ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸದ್ಯ ಅವರನ್ನು ಹೋಂಐಸೋಲೇಷನ್‍ಗೆ ಒಳಪಡಿಸಲಾಗಿದೆ. ರಾಮಂದಿರದ ಉಸ್ತುವಾರಿಯನ್ನು ನಾಲ್ಕು ಮಂದಿ ಅರ್ಚಕರಿಗೆ ವಹಿಸಲಾಗಿದೆ. ಅದರಲ್ಲಿ ದಾಸ್ ಪ್ರಮುಖರಾಗಿದ್ದಾರೆ. ಸದ್ಯ ದೇವಾಲಯದಲ್ಲಿ ಕರ್ತವ್ಯದಲ್ಲಿದ್ದ 16 ಮಂದಿ ಭದ್ರತಾ ಸಿಬ್ಬಂದಿಗೆ ಕೂಡ ಮಹಾಮಾರಿ ಕೋವಿಡ್ 19 ಒಕ್ಕರಿಸಿದೆ.

ಆಗಸ್ಟ್ 5ರಂದು ರಾಮಂದಿರದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ಸಾಧ್ಯತೆ ಇದೆ. ಇತ್ತ ಕೊರೊನಾ ವೈರಸ್ ಭೀತಿಯಿಂದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಯಾರೂ ಅಯೋಧ್ಯಗೆ ಬರಬೇಡಿ. ಕಾರ್ಯಕ್ರಮವನ್ನು ಟಿಯಲ್ಲೇ ವೀಕ್ಷಿಸಿ ಎಂದು ರಾಮಮಮದಿರದ ಟ್ರಸ್ಟ್ ಸದಸ್ಯರು ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ- ಟ್ರಸ್ಟ್ ಮನವಿ

ಕೊರೊನಾ ಹಿನ್ನೆಲೆಯಲ್ಲಿ ಕೇವಲ 200 ಜನರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗುತ್ತಿದೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡುವಂತೆ ಸದಸ್ಯರೊಬ್ಬರು ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ತಲಾ 50 ಮಂದಿಗೆ ಪ್ರತ್ಯೇಕ ಬ್ಲಾಕ್ ಗಳನ್ನು ರಚಿಸಲಾಗುವುದು. ಅದರಲ್ಲಿ ಒಂದು ಬ್ಲಾಕ್ ರಾಜಕೀಯ ಮುಖಂಡರಿಗೆ ಮೀಸಲಿಟ್ಟರೆ, ಇನ್ನೊಂದು ಬ್ಲಾಕ್ ನಲ್ಲಿ ದೇವಾಲಯದ ಆಡಳಿತಕ್ಕೆ ಸಂಬಂಧಿಸಿದ್ದಾಗಿರುತ್ತದೆ. ಮತ್ತೊಂದು ಅರ್ಚಕರು ಮತ್ತು ಧಾರ್ಮಿಕ ಮುಖಂಡರಿಗೆ ಮೀಸಲಿಡಲಾಗುತ್ತಿದೆ ಎಂದು ಕೆಲ ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಯೋಧ್ಯೆಗೆ ದಾಳಿ ಮಾಡಲು ಐಎಸ್‍ಐ ಸಂಚು – ಗುಪ್ತಚರ ಇಲಾಖೆ

ಭೂಮಿ ಪೂಜೆ ಸಮಾರಂಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಹಾಗೂ ಕಲ್ಯಾಣ್ ಸಿಂಗ್ ಮತ್ತಿರರು ಭಾಗಿಯಾಗಲಿದ್ದಾರೆ. ಓದಿ: ವಿಡಿಯೋ ಕಾನ್ಫರೆನ್ಸ್ ಮೂಲಕ ರಾಮ ಮಂದಿರ ಭೂಮಿ ಪೂಜೆಗೆ ವಿರೋಧ- ಉದ್ಧವ್ ಠಾಕ್ರೆ ಹೇಳಿಕೆಗೆ ವಿಎಚ್‍ಪಿ ಕಿಡಿ

Click to comment

Leave a Reply

Your email address will not be published. Required fields are marked *