ಧಾರವಾಡ: ಅ. 27ರ ಸಂಜೆ 5 ಗಂಟೆಯಿಂದ ಅ. 28ರ ಸಂಜೆ 5 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸ್ಕ್ಯಾನಿಂಗ್, ಝೆರಾಕ್ಸ್ ಹಾಗೂ ಕಂಪ್ಯೂಟರ್ ಕೇಂದ್ರಗಳು ಬಂದ್ ಆಗಲಿವೆ.
ಅ.28 ರಂದು ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಸುವ ಉದ್ದೇಶದಿಂದ ಅ. 27ರ ಸಂಜೆ 5 ಗಂಟೆಯಿಂದ ಅ. 28ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ಸ್ಕ್ಯಾನಿಂಗ್, ಝೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳು ಚುನಾವಣಾ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಆದೇಶ ಉಲ್ಲಂಘಿಸುವ ಇಂತಹ ಕೇಂದ್ರಗಳ ಮಾಲೀಕರು ಯಾವುದೇ ಪರಿಹಾರಕ್ಕೆ ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
Advertisement
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಸಿದ್ದಲಿಂಗಪ್ಪ ವಿ.ಸಂಕನೂರ, ಕಾಂಗ್ರೆಸ್‌ನಿಂದ ಆರ್. ಎಂ.ಕುಬೇರಪ್ಪ, ಜೆಡಿಎಸ್‌ನಿಂದ ಶಿವಶಂಕರ ಚನ್ನಪ್ಪ ಕಲ್ಲೂರ ಕಣದಲ್ಲಿದ್ದಾರೆ.