ಬೀದರ್: ಚಲಿಸುತ್ತಿದ್ದ ಖಾಸಗಿ ಬಸ್ ಎಂಜಿನ್ನಲ್ಲಿ ಉಂಟಾದ ಅಗ್ನಿ ಅವಘಡದಿಂದಾಗಿ ನೋಡು ನೋಡುತ್ತಲೇ ಬಸ್ ತುಂಬೆಲ್ಲ ಬೆಂಕಿ ಆವರಿಸಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.
Advertisement
ಜಿಲ್ಲೆಯ ಹುಮನಾಬಾದ್ ಸಮಿಪದ ಬೀದರ್- ಕಲಬುರಗಿ ಹೆದ್ದಾರಿಯ ಧುಮ್ಮನಸೂರು ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಡ್ರೈವರ್ ಸಮಯ ಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೀದರ್ ನಿಂದ ಬೆಂಗಳೂರಿಗೆ ಹೊರಟಿದ್ದಾಗ ರೋಡ್ ಬ್ರೇಕರ್ ಬಳಿ ಒಮ್ಮಲೆ ಜಂಪ್ ಆಗಿದ್ದು, ಹೀಗಾಗಿ ಬಸ್ ಇಂಜನ್ ನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಈ ಕುರಿತು ಅರಿವಾಗುತ್ತಿದ್ದಂತೆ ಚಾಲಕ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ.
Advertisement
Advertisement
ಬಸ್ ನಿಲ್ಲಿಸಿದ ತಕ್ಷಣವೇ ಚಾಲಕ ಬಸ್ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾನೆ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದರಿಂದಾಗಿ ಭಾರೀ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎರಡು ಅಗ್ನಿ ಶಾಮಕ ದಳದ ತಂಡ ಬೆಂಕಿ ನಂದಿಸಲು ಹರ ಸಾಹಸ ಪಟ್ಟಿದೆ. ಆದರೆ ನಂದಿಸುವ ಕಾರ್ಯ ನಡೆಯುವಷ್ಟರಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹುಮ್ನಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.