ಕಲಬುರಗಿ: ಮೃತರು ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿಲ್ಲ. ಅಫಜಲಪುರ ತಾಲೂಕಾಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ಉಮೇಶ್ ಜಾಧವ್ ಸಮರ್ಥನೆಗೆ ಮುಂದಾಗಿದ್ದಾರೆ.
ಆಕ್ಸಿಜನ್ ದುರಂತಕ್ಕೆ ತೇಪೆ ಹಚ್ಚೋಕೆ ಮುಂದಾಗಿರುವ ಮಾನ್ಯ ಸಂಸದರು, ಆಸ್ಪತ್ರೆಯಲ್ಲಿ ಆಮ್ಲಜನಕ, ರೆಮ್ಡಿಸಿವರ್ ಇಂಜೆಕ್ಷನ್ ಇದೆ. ಬೇಕಿದ್ರೆ ನನ್ನ ಜೊತೆ ಬನ್ನಿ, ನಾನು ತೋರಿಸುತ್ತೇನೆ ಎಂದು ಹೇಳಿದ್ದಾರೆ. ಮೃತರ ಕುಟುಂಬಸ್ಥರೇ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಬಗ್ಗೆ ಹೇಳುತ್ತಿದ್ರೆ ಸರ್ಕಾರ ಮಾತ್ರ ನುಣಚಿಕೊಳ್ಳೋಕೆ ಪ್ರಯತ್ನಕ್ಕೆ ಮುಂದಾಗಿದೆ.
ಇತ್ತ ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಅಫಜಲಪುರ ತಾಲೂಕು ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಲಾಗಿದೆ. ಇನ್ನು ಜಿಲ್ಲೆಯಲ್ಲಿರೋ ಆಕ್ಸಿಜನ್ ಪ್ಲಾಂಟ್ ಗಳು ದಂಧೆಗೆ ಇಳಿದಿದ್ದು, ನೆರೆಯ ಮಹಾರಾಷ್ಟ್ರಕ್ಕೆ ಪ್ರಾಣವಾಯು ಸರಬರಾಜು ಮಾಡುತ್ತಿರುವ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಇದನ್ನೂ ಓದಿ: ಮೂರು ಗಂಟೆ ಆಕ್ಸಿಜನ್ ಇಲ್ಲದೇ ನರಳಿ ನರಳಿ ಪ್ರಾಣ ಬಿಟ್ಟ ನಾಲ್ವರು
ಚಾಮರಾಜನಗರದಲ್ಲಿ 24 ಜನ ಸಾವನ್ನಪ್ಪಿದ್ರೂ ಆರೋಗ್ಯ ಸಚಿವರು ಆಕ್ಸಿಜನ್ ಇಲ್ಲದೇ ಮೂವರು ಮೃತರಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದರು. ಇದೀಗ ಡೆತ್ ರಿಪೋರ್ಟ್ ನಲ್ಲಿ 24 ಜನರು ಕೋವಿಡ್ ನಿಂದಲೇ ಸಾವನ್ನಪ್ಪಿದ್ದಾರೆ ಹೊರತು ಆಕ್ಸಿಜನ್ ಕೊರತೆಯಿಂದಲ್ಲ ಅಂತ ತನಿಖೆಗೂ ಅವಕಾಶ ನೀಡದೇ ತಮಗೆ ತಾವೇ ಕ್ಲೀನ್ ಚಿಟ್ ಪಡೆದುಕೊಂಡಿದೆ. ಇದನ್ನೂ ಓದಿ: ಆಕ್ಸಿಜನ್ ಇಲ್ಲದೆ ಮೂವರಷ್ಟೇ ಸಾವು ಅಂತ ಸಚಿವರಿಬ್ಬರ ಸಮರ್ಥನೆ