ಮುಂಬೈ: ಕೊರೊನಾ ಸೋಂಕು ರಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 81 ವರ್ಷದ ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರ್ ನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
Advertisement
ಪುರುಷೋತ್ತಮ್ ಗಜ್ಭಿಯೆ ಅವರು ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕೊರೊನಾ ವಾರ್ಡ್ನಲ್ಲಿ ದಾಖಲಾಗಿದ್ದರು. ಆದರೆ ಆಸ್ಪತ್ರೆಯ ಬಾತ್ರೂಂನಲ್ಲಿ ಸಾವನ್ನಪ್ಪಿರುವುದನ್ನು ಆಸ್ಪತ್ರೆಯ ಕೆಲಸಗಾರ ತಿಳಿಸಿದ್ದಾರೆ.
Advertisement
ವೃದ್ಧ ಆಕ್ಸಿಜನ್ ಪೈಪ್ ಬಳಸಿ ಆಸ್ಪತ್ರೆಯ ಬಾತ್ರೂಂನಲ್ಲಿ ನೇಣುಬಿದುಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
Advertisement
Advertisement
ನಾಗ್ಪುರ್ ಇದೀಗ ಹೊಸ ಕೊರೊನಾ ಹಾಟ್ಸ್ಪಾಟ್ ಆಗಿ ಮಾರ್ಪಟ್ಟಿದ್ದು, ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಸೋಮವಾರ ಒಂದೇ ದಿನ 3,177 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ 38,298 ಸಕ್ರಿಯ ಪ್ರಕರಣಗಳಿವೆ. ಹೀಗಾಗಿ ಜನರಲ್ಲಿ ಆತಂಕ ಮನೆ ಮಾಡಿದೆ.