ನವದೆಹಲಿ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಸಿಲಿಂಡರ್ ಕೊರತೆ ಉಂಟಾಗುತ್ತಿದೆ. ಆಮ್ಲಜನಕವನ್ನು ಪೂರೈಸಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ವಿಪರೀತ ಹಂತ ತಲುಪಿದ್ದು, ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಆಮ್ಲಜನಕದ ಸಿಲಿಂಡರ್ಗಳು ಬರಿದಾಗಲಿವೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಆಮ್ಲಜನಕ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಆತಂಕ ವ್ಯಕ್ತಪಡಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Advertisement
Serious oxygen crisis persists in Delhi. I again urge centre to urgently provide oxygen to Delhi. Some hospitals are left with just a few hours of oxygen.
— Arvind Kejriwal (@ArvindKejriwal) April 20, 2021
Advertisement
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ 8-10 ಗಂಟೆಗಳವರೆಗೆ ಲಭ್ಯವಿದೆ. ದೆಹಲಿಯ ಹೆಚ್ಚಿನ ಆಸ್ಪತ್ರೆಗಳಲ್ಲಿ, ಮುಂದಿನ 8 ರಿಂದ 12 ಗಂಟೆಗಳವರೆಗೆ ಮಾತ್ರ ಆಮ್ಲಜನಕ ಲಭ್ಯವಿದೆ. ದೆಹಲಿಗೆ ಆಮ್ಲಜನಕ ಪೂರೈಕೆ ಕೋಟಾವನ್ನು ಹೆಚ್ಚಿಸಲು ನಾವು ಒಂದು ವಾರದಿಂದ ಒತ್ತಾಯಿಸುತ್ತಿದ್ದೇವೆ. ಆಮ್ಲಜನಕವು ಸಾಕಷ್ಟು ಪ್ರಮಾಣದಲ್ಲಿ ಆಸ್ಪತ್ರೆಗಳನ್ನು ತಲುಪದಿದ್ದರೆ, ಆಕ್ರೋಶ ಉಂಟಾಗುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ
Advertisement
दिल्ली में अधिकतर अस्पतालों में केवल अगले 8 से 12 घंटे के लिए ही ऑक्सिजन उपलब्ध है.
हम एक हफ़्ते से दिल्ली को ऑक्सिजन सप्लाई कोटा बढ़ाने की माँग कर रहे हैं जोकि केंद्र सरकार को करना है . अगर कल सुबह तक पर्याप्त मात्रा में अस्पतालों में ऑक्सिजन नहीं पहुँची तो हाहाकार मच जाएगा. pic.twitter.com/omO7RCTaCj
— Manish Sisodia (@msisodia) April 20, 2021
Advertisement
ದೆಹಲಿಯಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ಪ್ರಾರಂಭವಾದ ಲಾಕ್ಡೌನ್ ಏಪ್ರಿಲ್ 26ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಇರಲಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅನುವು ಮಾಡಿಕೊಡಲಾಗಿದೆ. ಆದರೆ ಜನರು ಭಯಗೊಂಡು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.