ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ 2021-22ರಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಕೋವಿಡ್ ಹಿನ್ನಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆನ್ ಲೈನ್ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿಗಳ ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪರೀಕ್ಷೆ ಏನಿದ್ದರೂ ಆಫ್ ಲೈನ್ನಲ್ಲಿ ನಡೆಯುತ್ತದೆ. ಕೆಲ ವಿಶ್ವವಿದ್ಯಾಲಯಗಳು ಆನ್ ಲೈನ್ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಮಾತ್ರ ಇದಕ್ಕೆ ಅವಕಾಶವಿಲ್ಲ ಎಂದಿದ್ದಾರೆ.
Advertisement
Advertisement
ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರುವಾಗುತ್ತವೆ ಎಂದಿದ್ದಾರೆ.
Advertisement
Advertisement
ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಆಫ್ ಲೈನ್ ತರಗತಿಗಳನ್ನೂ ಆರಂಭ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್ ಲೈನ್ ಅಥವಾ ಆನ್ ಲೈನ್ ಕ್ಲಾಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ತಿಳಿಸಿದ್ದಾರೆ.