ಬೆಂಗಳೂರು: ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ತಮಿಳುನಾಡಿನ ಮಾದರಿ ಪರಿಹಾರ ನೀಡಬೇಕೆಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದ್ದು, ಸಿಎಂ ಯಡಿಯೂರಪ್ಪ ಪರಿಶೀಲನೆ ಮಾಡುವ ಭರವಸೆ ನೀಡಿದ್ದಾರೆ.
Advertisement
ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಕೋವಿಡ್ ಲಾಕ್ಡೌನ್ ಕಾರಣದಿಂದಾಗಿ ಮಾಧ್ಯಮಗಳು ಸಂಕಷ್ಟದಲ್ಲಿ ಸಿಲುಕಿದ್ದು, ಇದೇ ವೃತ್ತಿ ಅವಲಂಬಿಸಿರುವ ಹಲವು ಪತ್ರಕರ್ತರ ಬದುಕು ಕೂಡ ಅಯೋಮಯವಾಗಿದೆ. ಗ್ರಾಮೀಣ ಪತ್ರಕರ್ತರ ಪರಿಸ್ಥಿತಿ ಕೂಡ ಬಹಳ ಕಷ್ಟದಲ್ಲಿದೆ. ಇದನ್ನೂ ಓದಿ: ಲಾಕ್ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್
Advertisement
Advertisement
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ, ಪತ್ರಕರ್ತರಿಗೆ (ತಮಿಳುನಾಡಿನಲ್ಲಿ ತಲಾ 5 ಸಾವಿರ ನೀಡಿದ ಮಾದರಿಯಲ್ಲಿ) ಹಲವು ರಾಜ್ಯಗಳಲ್ಲಿ ನೆರವು ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ತಲಾ 10 ಸಾವಿರ ನೆರವು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇದೇ ಸಂದರ್ಭದಲ್ಲಿ ನಾಗರಾಜ್ ಅವರಿಗೆ ಚಿಕಿತ್ಸೆ ಭಾಗವಾಗಿ ಒಂದು ಲಕ್ಷ ರೂ. ನೆರವನ್ನು ಮುಖ್ಯಮಂತ್ರಿ ಮಂಜೂರು ಮಾಡಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ: ಸಿಎಂ ಘೋಷಣೆ
Advertisement