ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೊರೊನಾದಿಂದ ಆಸ್ಪತ್ರೆಯಲ್ಲಿದ್ದರೂ ಸಿಎಂ ಫುಲ್ ಆಕ್ಟಿವ್ ಆಗಿದ್ದಾರೆ.
ಸಿಎಂ ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದುಕೊಂಡೇ ಸರ್ಕಾರದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೆಲ ಮಹತ್ವವಾದ ಕಡತಗಳನ್ನು ಪರೀಶೀಲನೆ ನಡೆಸಿ ಸಹಿ ಹಾಕಿದ್ದಾರೆ. ಅಷ್ಟೇ ಅಲ್ಲದೇ ಬೆಳಗ್ಗೆಯೂ ವಿವಿಧ ಹಿರಿಯ ಅಧಿಕಾರಿಗಳಿಗೆ ಕೊರೊನಾ ನಿರ್ವಹಣೆ ಕುರಿತು ದೂರವಾಣಿ ಮೂಲಕ ಚರ್ಚಿಸಿದ್ದಾರೆ.
Advertisement
Advertisement
ಮಣಿಪಾಲ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆಯೂ ಸಿಎಂ ತಮ್ಮ ಕರ್ತವ್ಯ ಮರೆಯಲಿಲ್ಲ. ಈ ಮೂಲಕ ಕೊರೊನಾ ಬಂದರೂ ಧೃತಿಗೆಡದೆ ಆಸ್ಪತ್ರೆಯಲ್ಲೇ ಸಿಎಂ ಯಡಿಯೂರಪ್ಪ ಡ್ಯೂಟಿ ನಿರ್ವಹಿಸುತ್ತಿದ್ದಾರೆ.
Advertisement
ಸಿಎಂ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾದ ಬಳಿಕ ಸೋಮವಾರ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.