ಆಸ್ಪತ್ರೆಯಿಂದ ಅಮಿತ್ ಶಾ ಡಿಸ್ಚಾರ್ಜ್

Public TV
1 Min Read
Amit shah

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.

ಆಯಾಸ ಮತ್ತು ಮೈ ಕೈ ನೋವು ಕಾಣಿಸಿಕೊಂಡ ಹಿನ್ನೆಲೆ ಅಮಿತ್ ಶಾ ಆಗಸ್ಟ್ 28ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದ ಆಸ್ಪತ್ರೆ, ಅಮಿತ್ ಶಾ ಅವರು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿತ್ತು.

ಆಗಸ್ಟ್ 2ರಂದು ಕೋವಿಡ್ ಪರೀಕ್ಷೆಗೆ ಒಳಗಾದಾಗ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆಗಸ್ಟ್ 14ರಂದು ಡಿಸ್ಚಾರ್ಜ್ ಆಗಿದ್ದರು. ಡಿಸ್ಚಾರ್ಜ್ ಬಳಿಕ 10 ದಿನ ಹೋಂ ಐಸೋಲೇಶನ್ ನಲ್ಲಿರೋದಾಗಿ ಶಾ ಹೇಳಿದ್ದರು. ಈ ನಡುವೆ ತೀವ್ರ ಆಯಾಸ ಕಾಣಿಸಿಕೊಂಡಿದ್ದರಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು.

Share This Article