ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ.
ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
Advertisement
ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ.
Advertisement
ಆಸ್ಪತ್ರೆ ಸಿಬ್ಬಂದಿ ಗುರುವಾರ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬ ಬಾತ್ರೂಮ್ ಕಿಟಿಕಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಅಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿ ಆತ್ಮಹತ್ಯೆಗೆ ತನ್ನದೇ ಬಟ್ಟೆ ಬಳಸಿದ್ದಾನೆ ಎಂದು ವರದಿಯಾಗಿದೆ.
Advertisement
ಮೃದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ.
Advertisement
ಜುಲೈ 11ರಂದು ಕೂಡ ಇಂತದ್ದೇ ಒಂದು ಘಟನೆ ನಡದಿತ್ತು. ಏಮ್ಸ್ ಆಸ್ಪತ್ರೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಮನೋ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆಸ್ಪತ್ರೆಯ ಹಾಸ್ಟೆಲ್ ನಲ್ಲಿ ವಾಸವಿದ್ದು, ಅಂದು ಕಟ್ಟಡದ 10ನೇ ಮಹಡಿಯಲ್ಲಿ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ವೈದ್ಯರನ್ನು ಡಾ. ಅನುರಗ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಡ ಯಾವುದೇ ಡೆತ್ನೋಡ್ ಬರೆದಿರಲಿಲ್ಲ. ಸಂಜೆ 5 ಗಂಟೆ ಸುಮಾರಿಗೆ ವೈದ್ಯರು ಈ ನಿರ್ಧಾರ ತೆಗೆದುಕೊಂಡಿದ್ದು, ಅವರ ಮೊಬೈಲ್ 10ನೇ ಮಹಡಿಯಲ್ಲಿ ದೊರೆತಿತ್ತು ಎಂದು ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿದ್ದರು.
ಖಿನ್ನತೆಗೊಳಗಾಗಿರುವ ಕುಮಾರ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ತನ್ನ ಜೀವನದ ಬಗ್ಗೆ ಕುಮಾರ್ ಬ್ಲಾಗ್ ನಲ್ಲಿ ಬರೆದುಕೊಂಡಿದ್ದರು ಎಂದು ಅವರದ್ದೇ ವಿಭಾಗ ವೈದ್ಯರು ತಿಳಿಸಿದ್ದಾರೆ.