ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ಇಲ್ಲದ ವಲಯ. ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಟಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಬೇಕೆಂದು ತಮ್ಮಲ್ಲಿ ವಿನಂತಿ ಎಂಬ ಬೋರ್ಡ್ ಜಿಲ್ಲೆಯ ಶೃಂಗೇರಿಯಲ್ಲಿ ಕಂಡು ಬಂದಿದೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಕುತೂಹಲ ಭರಿತರಾಗಿದ್ದಾರೆ.
ಕಳೆದೊಂದು ವಾರದಿಂದ ಶೃಂಗೇರಿ ಜನ ಬ್ಯಾನರ್ ಅಂದ್ರೆ ಬೆಚ್ಚಿ ಬೀಳ್ತಿದ್ದಾರೆ. ಶಂಕರಾಚಾರ್ಯರ ಪುತ್ಥಳಿ ಮೇಲೆ ಈದ್ಮಿಲಾದ್ ಹಬ್ಬದಲ್ಲಿ ಶುಭ ಕೋರುವ ಬ್ಯಾನರ್ ಹಾಕಿದ್ದರಿಂದ ಶೃಂಗೇರಿಯಲ್ಲಿ ವಾದ-ವಿವಾದ ಪ್ರತಿಭಟನೆಗಳೇ ನಡೆದಿದ್ದವು. ನೋಡ-ನೋಡುತ್ತಿದ್ದಂತೆ ಶೃಂಗೇರಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಇದೀಗ ಮತ್ತೆ ಬ್ಯಾನರ್ ಸುದ್ದಿ ಶಾರದಾಂಭೆ ಮಡಿಲಲ್ಲಿ ಸದ್ದು ಮಾಡುತ್ತಿದೆ. ಬದಲಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧದ ಬ್ಯಾನರ್.
Advertisement
ಶೃಂಗೇರಿ ಪ್ರಸಿದ್ಧ-ಪುಣ್ಯ ಹಾಗೂ ಪ್ರವಾಸಿ ತಾಣ. ನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಆದರೆ ಇಂತಹ ಪ್ರವಾಸಿ ತಾಣದಲ್ಲಿ ಬಡಜನರ ಗೋಳನ್ನ ಕೇಳುವವರಿಲ್ಲದಂತಾಗಿದೆ. ಸುಮಾರು 40-50 ಸಾವಿರಕ್ಕೂ ಅಧಿಕ ಜನಸಂಖ್ಯೆಯುಳ್ಳ ಶೃಂಗೇರಿಯಲ್ಲಿ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಸಣ್ಣ-ಪುಟ್ಟ ಜ್ವರ-ಶೀಥದಂತಹ ಕಾಯಿಲೆ ಹೊರತುಪಡಿಸಿ ಇನ್ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಾಯಲ್ಲಿ ಬರೋದು ಮಾತು ಒಂದೇ. ಇಲ್ಲಿ ಆಗಲ್ಲ, ಮಣಿಪಾಲ್ಗೆ ಹೋಗಿ ಅನ್ನೋದು. ಇದರಿಂದ ಸ್ಥಳಿಯರು ಕೂಡ ಸಂಕಷ್ಟಕ್ಕೀಡಾಗಿದ್ದಾರೆ.
Advertisement
Advertisement
ಈಗಿರುವ ಆಸ್ಪತ್ರೆಯಲ್ಲಿ ಯಾವುದೇ ಸುಸಜ್ಜಿತ ವ್ಯವಸ್ಥೆಯಾಗಲಿ, ಸೌಲಭ್ಯವಾಗಲಿ ಇಲ್ಲ. ಎಲ್ಲಾ ವಿಭಾಗದಲ್ಲೂ ವೈದ್ಯರೂ ಇಲ್ಲ. ಮಣಿಪಾಲ್ ಅಥವಾ ಉಡುಪಿಗೆ ಶೃಂಗೇರಿಯಿಂದ ಸುಮಾರು 100 ಕಿ.ಮೀ. ಇದೆ. ಅದು ಕೂಡ ಘಾಟಿಯ ರಸ್ತೆ. ತುರ್ತು ಸಂದರ್ಭದಲ್ಲಿ ಅಲ್ಲಿಗೆ ಹೋಗಲು ಎರಡರಿಂದ ಮೂರು ಗಂಟೆ ಬೇಕು. ಅಷ್ಟು ದೂರ ಹೋಗುವಾಗ ಮಾರ್ಗ ಮಧ್ಯೆ ಏನು ಬೇಕಾದ್ರು ಸಂಭವಿಸಬಹುದು. ಈಗಾಗಲೇ ಮಾರ್ಗ ಮಧ್ಯೆ ಕೊನೆಯುಸಿರೆಳೆದಿರೋರು ಹಲವರಿದ್ದಾರೆ. ಇನ್ನು ಕೆಲವರು ಅಲ್ಲಿನ ಬಿಲ್ ನೋಡಿ ಜೀವ ಉಳಿದರು ಜೀವನವೇ ಹೋದಂತಾಗಿದೆ.
Advertisement
ಸಾಲ ತೀರಿಸಲು ದುಡಿಯುತ್ತಲೇ ಇದ್ದಾರೆ. ಹಾಗಾಗಿ ತಾಲೂಕಿನ ಜನ ತಾಲೂಕಿನ ಅಲ್ಲಲ್ಲೇ ಈ ರೀತಿಯ ಬ್ಯಾನರ್ ಬರೆಸಿ ಹಾಕಿದ್ದಾರೆ. ಕೂಡಲೇ ತಾಲೂಕಿಗೊಂಡು ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.