– ಆಯುಷ್ ಇಲಾಖೆ ಕಾರ್ಯದರ್ಶಿ ವಿರುದ್ಧ ಆಕ್ರೋಶ
– ಹಿಂದಿ ಬರದವರು ತರಬೇತಿಯಿಂದ ಹೊರ ನಡೆಯಬಹುದು ಎಂದಿದ್ದ ಅಧಿಕಾರಿ
ಬೆಂಗಳೂರು: ಹಿಂದಿ ಮಾತನಾಡಲು ಬಾರದವರು ತರಬೇತಿಯಿಂದ ಹೊರ ನಡೆಯಬಹುದು ಎಂದು ತಾಕೀತು ಮಾಡಿದ್ದ ಆಯುಷ್ ಇಲಾಖೆ ಅಧಿಕಾರಿ ವರ್ತನೆ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ‘ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ,’ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ?
1/3
— H D Kumaraswamy (@hd_kumaraswamy) August 23, 2020
Advertisement
ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಆಯುಷ್ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಹಿಂದಿ ಮಾತನಾಡಲು ಬಾರದವರು ತರಬೇತಿಯಿಂದ ಹೊರ ನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕೆಂಬ ನಾಚಿಕೆ ಇಲ್ಲದ ಉತ್ಸಾಹವೋ ಎಂದು ಮೊದಲ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.
Advertisement
ಸಂವಿಧಾನ ಬದ್ಧ ‘ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ?
2/3
— H D Kumaraswamy (@hd_kumaraswamy) August 23, 2020
Advertisement
ಮತ್ತೊಂದು ಟ್ವೀಟ್ನಲ್ಲಿ, ಸಂವಿಧಾನ ಬದ್ಧ `ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಯೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ, ಸಂವಿಧಾನ ವಿರೋಧಿ ನಡೆಯಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
Advertisement
ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು.
3/3
— H D Kumaraswamy (@hd_kumaraswamy) August 23, 2020
ಕೊನೆಯ ಟ್ವೀಟ್ ನಲ್ಲಿ, ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು, ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.