Advertisements

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?

ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡದಿಂದ ಮೂವರು ಆಟಗಾರರು ಗಾಯದಿಂದಾಗಿ ಹೊರಬಿದ್ದಿದ್ದಾರೆ. ಈ ನಡುವೆ ಈ ಮೂವರಿಗೆ ಬದಲಿ ಆಟಗಾರರಾಗಿ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್‍ಗೆ ತೆರಳಲಿದ್ದಾರೆ ಎಂಬ ಕುರಿತು ವರದಿಯಾಗಿದೆ.

Advertisements

ಭಾರತ ತಂಡದ ಆಟಗಾರರಾದ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯಕ್ಕೆ ತುತ್ತಾಗಿ ತವರಿಗೆ ಮರಳಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಬದಲಿಆಟಗಾರರಾಗಿ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಕಳುಹಿಸಲು ಬಿಸಿಸಿಐ ಪ್ಲಾನ್ ಮಾಡಿದೆ. ಹಾಗೆ ಜಯಂತ್ ಯಾದವ್ ಅವರನ್ನು ಕಳುಹಿಸಿಕೊಡುವ ಸಾಧ್ಯತೆ ಇದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೋರ್ವರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

Advertisements

ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಈಗಾಗಲೇ ಭಾರತ ಹಾಗೂ ಶ್ರೀಲಂಕಾ ಸರಣಿಗಾಗಿ ಲಂಕಾ ಪ್ರವಾಸ ಕೈಗೊಂಡಿದ್ದಾರೆ. ಈ ಸರಣಿಯ ಏಕದಿನ ಪಂದ್ಯದಲ್ಲಿ ಇಬ್ಬರು ಆಟಗಾರರು ಕೂಡ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹಾಗಾಗಿ ಬಿಸಿಸಿಐ ಈ ಇಬ್ಬರು ಆಟಗಾರರನ್ನು ಇಂಗ್ಲೆಂಡ್‍ಗೆ ಕಳುಹಿಸಿಕೊಡಲು ತೀರ್ಮಾನಿಸಿದೆ. ಇವರೊಂದಿಗೆ ಜಯಂತ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದ್ದು, ಇನ್ನೂ ಕೆಲ ದಿನಗಳಲ್ಲಿ ಈ ಕುರಿತು ಬಿಸಿಸಿಐ ಸ್ಪಷ್ಟ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

Advertisements
Exit mobile version