ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 9,579 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 52 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಬರೋಬ್ಬರಿ 6,387 ಮಂದಿಗೆ ಕೊರೊನಾ ದೃಢಪಟ್ಟಿದ್ದು, 40 ಜನ ಕೊರೊನಾಗೆ ಬಲಿಯಾಗಿದ್ದಾರೆ.
Advertisement
ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 75,985 ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 82,240 ಮಂದಿಗೆ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,74,869 ಕ್ಕೆ ಏರಿಕೆ ಕಂಡಿದೆ. ಈ ಪೈಕಿ 9,85,924 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Advertisement
Advertisement
Advertisement
ಒಟ್ಟು ಇಲ್ಲಿಯವರೆಗೆ 12,941 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 9,313 ಆಂಟಿಜನ್ ಟೆಸ್ಟ್ 1,09,852 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,16,165 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೀದರ್ 465, ಮೈಸೂರು 362, ಕಲಬುರಗಿ 335, ತುಮಕೂರು 239, ಬೆಂಗಳೂರು ಗ್ರಾಮಾಂತರ 192, ಬಳ್ಳಾರಿ 132, ಮತ್ತು ವಿಜಯಪುರದಲ್ಲಿ 122 ಮಂದಿಗೆ ಸೋಂಕು ಬಂದಿದೆ. ಒಟ್ಟು 470 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 176, ಕಲಬುರಗಿ 44, ಕೋಲಾರ 48, ಮೈಸೂರು 29, ಬೀದರ್ 21 ಮತ್ತು ತುಮಕೂರಿನಲ್ಲಿ 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.