ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.
ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ.
Advertisement
Advertisement
ತರಕಾರಿ, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು ಸರ್ಕಾರಿ ಆಹಾರ ಮಳಿಗೆಗಳಿಗೆ ಮಾತ್ರ ವಿನಾಯಿತಿ ಕೊಡಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಸಾರಿಗೆ ಸ್ತಬ್ಧವಾಗಲಿದ್ದು, ಮೆಡಿಕಲ್, ಆಸ್ಪತ್ರೆ ಒಳಗೊಂಡಂತೆ ತುರ್ತು ಸೇವೆಗಳಿಗೆ ಮಾತ್ರ ಆಟೋ ಇತ್ಯಾದಿ ವಾಹನಗಳನ್ನು ಬಳಸಬಹುದು ಎಂದು ಅನೀಸ್ ಕೆ.ಜಾಯ್ ಅವರು ತಿಳಿಸಿದ್ದಾರೆ.
Advertisement
Advertisement
ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದ್ದು, ಇಲ್ಲಿಗೆ ಹಾಜರಾಗುವ ಶಿಕ್ಷಕರಿಗೆ ಸ್ವಂತ ವಾಹನ ಅಥವಾ ನಿಗದಿಪಡಿಸಿರುವ ಬಸ್ಗಳಲ್ಲಿ ಬರುವಂತೆ ಸೂಚಿಸಿದ್ದೇವೆ. ಕರ್ತವ್ಯಕ್ಕೆ ಹಾಜರಾಗುವಾಗ ತಮ್ಮ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಇದೇ ನಿಯಮಗಳನ್ನು ಜುಲೈ 31ರವಗೆ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.