ಬೆಂಗಳೂರು: ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸ್ತಿದೆ.
Advertisement
ಇಂದು ಕಲಾಪ ಆರಂಭವಾದ ಕೂಡಲೇ ಸಭಾಪತಿ ಪೀಠದಲ್ಲಿ ಉಪಸಭಾಪತಿ ಧರ್ಮೇಗೌಡರನ್ನು ಕೂರಿಸಲು ಬಿಜೆಪಿ ಪ್ಲಾನ್ ಮಾಡಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊದಲೇ ಬಂದು ಪೀಠದಲ್ಲಿ ಕುಳಿತರೆ ಪಕ್ಕದಲ್ಲೇ ಮತ್ತೊಂದು ಪೀಠ ಹಾಕಿ ಧರ್ಮೇಗೌಡರನ್ನು ಕೂರಿಸಲು ಸಹ ಪ್ಲಾನ್ ಮಾಡ್ಕೊಂಡಿದೆ.
Advertisement
Advertisement
ಅವಿಶ್ವಾಸ ನೊಟೀಸ್ ಹಿನ್ನೆಲೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಗೆ ಪೀಠದ ಮೇಲೆ ಕೂರೋದಕ್ಕೆ ಅವಕಾಶ ಕೊಡದೇ ಬಿಜೆಪಿ ಗದ್ದಲ ನಡೆಸುವ ಸಂಭವ ಇದೆ. ಸಭಾಪತಿ ಬದಲಾದಲ್ಲಿ ಗೋಹತ್ಯೆ ತಡೆ ಬಿಲ್ಗೆ ಅಂಗೀಕಾರ ಪಡೆಯಲು ಚಿಂತನೆ ನಡೆಸಿದೆ. ಸಭಾಪತಿ ವಿಚಾರದಲ್ಲಿ ಜೆಡಿಎಸ್ ಬೆಂಬಲ ಸಿಗುವ ವಿಶ್ವಾಸದಲ್ಲಿ ಬಿಜೆಪಿ ಇದೆ.
Advertisement
ಸಭಾಪತಿ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ಸುಶೀಲ್ ನಮೋಶಿ, ಮಹಾಂತೇಶ ಕವಟಗಿಮಠ, ಅರುಣ್ ಶಹಾಪೂರ ಹೆಸರು ಕೇಳಿಬರ್ತಿವೆ.