ಬೆಂಗಳೂರು: ಇಂದು ರಾಜ್ಯದಲ್ಲಿ 1,431 ಜನಕ್ಕೆ ಸೋಂಕು ತಗುಲಿದ್ದು, ಸದ್ಯ 22,497 ಸಕ್ರಿಯ ಪ್ರಕರಣಗಳಿವೆ. ಇವತ್ತು ಕೊರೊನಾಗೆ 21 ಜನ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 36,979ಕ್ಕೆ ಏರಿಕೆಯಾಗಿದೆ.
Advertisement
1,611 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.0.93 ಮತ್ತು ಮೃತಪಟ್ಟವರ ಪ್ರಮಾಣ ಶೇ.1.46ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 29,29,464 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂದು ಒಟ್ಟು 1,52,767 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
Advertisement
Advertisement
ರಾಜಧಾನಿ ಬೆಂಗಳೂರಿಗಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಧಿಕ ಕೊರೊನಾ ಪ್ರಕರಣಗಳು ವರದಿಯಾಗಿವೆ. ಸಿಲಿಕಾನ್ ಸಿಟಿಯಲ್ಲಿಂದು 305 ಜನಕ್ಕೆ ಸೋಂಕು ತಗುಲಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿಯೇ 8,166 ಸಕ್ರಿಯ ಪ್ರಕರಣಗಳಿವೆ. ದಕ್ಷಿಣ ಕನ್ನಡದಲ್ಲಿ 311 ಮತ್ತು ಉಡುಪಿಯಲ್ಲಿ 177 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಯಾದಗಿರಿಯಲ್ಲಿಂದು ಯಾವುದೇ ಪ್ರಕರಣ ವರದಿಯಾಗಿಲ್ಲ.
Advertisement
ಯಾವ ಜಿಲ್ಲೆಯಲ್ಲಿ ಎಷ್ಟು?: ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 5, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 305, ಬೀದರ್ 3, ಚಾಮರಾಜನಗರ 10, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 45, ಚಿತ್ರದುರ್ಗ 20, ದಕ್ಷಿಣ ಕನ್ನಡ 311, ದಾವಣಗೆರೆ 3, ಧಾರವಾಡ 15, ಗದಗ 4, ಹಾಸನ 87, ಹಾವೇರಿ 3, ಕಲಬುರಗಿ 3, ಕೊಡಗು 82, ಕೋಲಾರ 23, ಕೊಪ್ಪಳ 1, ಮಂಡ್ಯ 32, ಮೈಸೂರು 83, ರಾಯಚೂರು 4, ರಾಮನಗರ 6, ಶಿವಮೊಗ್ಗ 41, ತುಮಕೂರು 51, ಉಡುಪಿ 177, ಉತ್ತರ ಕನ್ನಡ 64, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.