ನವದೆಹಲಿ: ಪೆಟ್ರೋಲ್, ಡಿಸೇಲ್ನ ನಿರಂತರ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಇಂದು ದೆಹಲಿಯಲ್ಲಿ ಯೂತ್ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಅಧ್ಯಕ್ಷ ಬಿ.ವಿ ಶ್ರೀವಾಸ್ ನೇತೃತ್ವದಲ್ಲಿ ದೆಹಲಿ ಪ್ರಮುಖ ರಸ್ತೆಗಳಲ್ಲಿ ಎತ್ತಿನಗಾಡಿ ಓಡಿಸಿ, ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ಮಾತನಾಡಿದ ಬಿ.ವಿ ಶ್ರೀನಿವಾಸ್, ಅಂತರಾಷ್ಟ್ರೀಯ ಮಟ್ಟದಲ್ಲಿ ಈಗ ಕಚ್ಚಾ ತೈಲದ ಬೆಲೆ ವ್ಯಾಪಕವಾಗಿ ಕುಸಿದಿದೆ. ಆದರೂ ಕೇಂದ್ರ ಸರ್ಕಾರ ಕಳೆದ 23 ದಿನಗಳಿಂದ ನಿರಂತರವಾಗಿ ಪ್ರತಿನಿತ್ಯವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿರುವುದು ಸರಿಯಲ್ಲ ಎಂದರು.
Advertisement
Advertisement
ಕಚ್ಚಾ ತೈಲದ ಬೆಲೆ ಇಳಿಕೆಯಾದಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವುದು ಸಾಮಾನ್ಯವಾದ ಸಂಗತಿ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲ ಕುಸಿದಿದ್ದರೂ ಪ್ರತಿದಿನವೂ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸುತ್ತಿದೆ. ಈ ಮೂಲಕ ಲಾಕ್ಡೌನ್ ಮತ್ತು ಕೊರೊನಾ ಕಷ್ಟದಲ್ಲಿರುವ ಜನ ಸಾಮಾನ್ಯರಿಂದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
Advertisement
Advertisement
ಜನರು ಕಷ್ಟದಲ್ಲಿದ್ದಾಗಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನರಿಗೆ ಬೇಕಿರುವ ಇತರೆ ಅಗತ್ಯ ವಸ್ತುಗಳ ಬೆಲೆಗಳು ಕೂಡ ಏರಿಕೆಯಾಗುತ್ತಿವೆ ಹೀಗಾಗಿ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಶ್ರೀನಿವಾಸ್ ಒತ್ತಾಯಿಸಿದರು.
ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಪವಾರ್, ಕಾರ್ಯದರ್ಶಿಗಳಾದ ಖುಸ್ಬೂ ಶರ್ಮಾ, ಮುಖೇಶ್ ಕುಮಾರ್, ಮೋಹಿತ್ ಚೌಧರಿ, ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Resounding the anger and frustration of Indians across the country the Indian Youth Congress led a symbolic protest outside the Petroleum Ministry.
Fuel prices have been continuously hiked for 21 days during the pandemic.
This cruelty won't be forgiven.#SpeakUpAgainstFuelHike pic.twitter.com/iyzU7sJgao
— Indian Youth Congress (@IYC) June 29, 2020