ಉಡುಪಿ: ಜಿಲ್ಲೆಯಲ್ಲಿ ಇಂದು 14 ಜನರಲ್ಲಿ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಜಿಲ್ಲೆಯ ಒಟ್ಟು ಪೀಡಿತರ ಸಂಖ್ಯೆ 1242 ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ಓ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಸೋಂಕಿತರ ಪೈಕಿ ಮಹಾರಾಷ್ಟ್ರದಿಂದ ಬಂದ 4, ಕೇರಳ ರಾಜ್ಯದ 1 ಕೇಸ್ ಇದೆ. ಉಡುಪಿಗೆ ಬೆಂಗಳೂರಿಂದ ಬಂದ ನಾಲ್ವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆಯ ಐವರಿಗೆ ಕೋವಿಡ್-19 ಆವರಿಸಿದೆ. ಉಡುಪಿಯವರಿಗೆ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಸೋಂಕು ಅಂಟಿದೆ ಎಂದು ಡಿಎಚ್ಓ ಹೇಳಿದರು.
Advertisement
Advertisement
ಉಡುಪಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1242ಕ್ಕೆ ಏರಿಕೆಯಾಗಿದ್ದು, ಇಂದು 21 ಜನ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಈವರಗೆ 1190 ಜನ ಗುಣಮುಖರಾಗಿ ಮನೆ ಸೇರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ವಾರದದಿಂದ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಪಾಸಿಟಿವ್ ಬರುತ್ತಿದೆ. ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಜೊತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸಮುದಾಯಕ್ಕೆ ಹಬ್ಬದಂತೆ ಎಚ್ಚರಿಕೆ ವಹಿಸಬೇಕು ಎಂದರು.