ಲಕ್ನೋ: ಉತ್ತರ ಪ್ರದೇಶದ ಕಂದಾಯ ಮತ್ತು ಪ್ರವಾಹ ನಿಯಂತ್ರಣ ಸಚಿವ ವಿಜಯ್ ಕಶ್ಯಪ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮುಜಫರ್ನಗರದ ಚಾರ್ತವಾಲ್ ಅಸೆಂಬ್ಲಿ ಶಾಸಕರಾಗಿದ್ದ ಕಶ್ಯಪ್(56) ಗುರಗಾಂವ್ನ ಮೆದಂತ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಇವರು ಕೊರೊನಾ ಸೋಂಕಿಗೆ ಬಲಿಯಾದ ಮೂರನೇ ಯುಪಿ ಸಚಿವರಾಗಿದ್ದು, ಕಳೆದ ವರ್ಷ ಉತ್ತರ ಪ್ರದೇಶದ ಮಂತ್ರಿಗಳಾದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾನ್ ಸೋಂಕಿನಿಂದ ಸಾವನ್ನಪ್ಪಿದ್ದರು.
Advertisement
Advertisement
ವಿಜಯ್ ಕಶ್ಯಪ್ರವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರದ ಬಿಜೆಪಿ ಮುಖಂಡ ಮತ್ತು ಸಚಿವರಾದ ವಿಜಯ್ ಕಶ್ಯಪ್ರವರ ಸಾವಿನ ಸುದ್ದಿ ಬಹಳ ದುಃಖವನ್ನುಂಟು ಮಾಡಿದೆ. ಅವರು ತಳಮಟ್ಟದವರೊಂದಿಗೆ ಸಂಪರ್ಕ ಹೊಂದಿದ್ದನಾಯಕರಾಗಿದ್ದರು ಹಾಗೂ ಯಾವಾಗಲೂ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳನ್ನು ಮಾಡುವಲ್ಲಿ ತೊಡಗಿಸಿಕೊಂಡಿದ್ದರು. ದುಃಖದ ಈ ಕ್ಷಣದಲ್ಲಿ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ನನ್ನ ಸಂತಾಪ. ಓಂ ಶಾಂತಿ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Advertisement
भाजपा नेता और उत्तर प्रदेश सरकार में मंत्री विजय कश्यप जी के निधन से अत्यंत दुख हुआ है। वे जमीन से जुड़े नेता थे और सदा जनहित के कार्यों में समर्पित रहे। शोक की इस घड़ी में उनके परिजनों और प्रशंसकों के प्रति मेरी संवेदनाएं। ओम शांति!
— Narendra Modi (@narendramodi) May 18, 2021
Advertisement
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಕೂಡ ವಿಜಯ್ ಕಶ್ಯಪ್ರವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
उत्तर प्रदेश सरकार में मेरे सहयोगी तथा राजस्व व बाढ़ नियंत्रण राज्यमंत्री श्री विजय कश्यप जी का निधन अत्यंत दुःखद है।
प्रभु श्री राम से प्रार्थना है कि दिवंगत आत्मा को अपने परम धाम में स्थान व शोकाकुल परिजनों को यह दुःख सहन करने की शक्ति प्रदान करें।
ॐ शांति
— Yogi Adityanath (@myogiadityanath) May 18, 2021