– ಕೇರಳ ಸರ್ಕಾರದಿಂದ ದರ ನಿಗದಿಗೊಳಿಸಿ ಆದೇಶ
ತಿರುವನಂತಪುರಂ: ಕೋವಿಡ್ ಹರಡುವಿಕೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಅವಶ್ಯಕವಾದ ವಸ್ತುಗಳ ಬೆಲೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.
Advertisement
ಯಾವುದಕ್ಕೆ ಎಷ್ಟು?: ಪಿಪಿಇ ಕಿಟ್‍ಗಳನ್ನು ಗರಿಷ್ಠ 273 ರೂಪಾಯಿಗೆ ಮಾತ್ರ ಮಾರಾಟ ಮಾಡಬಹುದು. ಒಂದು ಎನ್95 ಮಾಸ್ಕ್‌ಗೆ 22 ರೂ., ಸರ್ಜಿಕಲ್ ಮಾಸ್ಕ್‌ಗೆ 3 ರೂಪಾಯಿ 90 ಪೈಸೆ ಎಂದು ನಿಗದಿಗೊಳಿಸಲಾಗಿದೆ.
Advertisement
Advertisement
ಅಲ್ಲದೆ ಕೋವಿಡ್ ಹರಡುವಿಕೆ ನಿಯಂತ್ರಿಸಲು ಬಳಸುವ ಸ್ಯಾನಿಟೈಸರ್ ಮಾರಾಟಕ್ಕೂ ದರ ನಿಗದಿಗೊಳಿಸಲಾಗಿದ್ದು, ಅರ್ಧ ಲೀಟರ್ ಸ್ಯಾನಿಟೈಸರ್‍ಗೆ ಗರಿಷ್ಠ 192 ರೂ. ಮಾತ್ರ ಪಡೆಯಬಹುದು. ಕೋವಿಡ್ ವೇಗವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನಸಾಮಾನ್ಯರಿಗೂ ಕೈಗೆಟಕುವ ದರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ವಸ್ತುಗಳನ್ನು ದೊರಕಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ನಿರ್ದೇಶನದನ್ವಯ ಕೇರಳ ಸರ್ಕಾರ ಈ ದರ ನಿಗದಿಗೊಳಿಸಿದೆ.
Advertisement
ಪಿಪಿಇ ಕಿಟ್-273, ಎನ್95 ಮಾಸ್ಕ್ – 22 ರೂ., ಟ್ರಿಪಲ್ ಲೇಯರ್ ಮಾಸ್ಕ್- 3.90 ರೂ., ಫೇಸ್ ಶೀಲ್ಡ್-21 ರೂ., ಡಿಸ್ಪೋಸೇಬಲ್ ಏಪ್ರನ್-12 ರೂ., ಸರ್ಜಿಕಲ್ ಗೌನ್- 65 ರೂ., ಎಕ್ಸಾಮಿನೇಷನ್ ಗ್ಲೌಸ್- 5.75 ರೂ., ಹ್ಯಾಂಡ್ ಸ್ಯಾನಿಟೈಸರ್ (500 ಎಂಎಲ್) – 192 ರೂ., ಹ್ಯಾಂಡ್ ಸ್ಯಾನಿಟೈಸರ್ (200 ಎಂಎಲ್) – 98 ರೂ., ಹ್ಯಾಂಡ್ ಸ್ಯಾನಿಟೈಸರ್ (100 ಎಂಎಲ್) – 55 ರೂ., ಸ್ಟೆರೈಲ್ ಗ್ಲೌಸ್ (1 ಜೊತೆ) – 12 ರೂ., ಎನ್‌ಆರ್‌ಬಿ ಮಾಸ್ಕ್ – 80 ರೂ., ಹ್ಯೂಮಿಡಿಫೈರ್ ಫ್ಲೋ ಮೀಟರ್-1520 ರೂ., ಫಿಂಗರ್ ಟಿಪ್ ಪಲ್ಸ್ ಆಕ್ಸಿಮೀಟರ್- 1500 ರೂ.