ಬೆಂಗಳೂರು: ಎರಡು ಬಾರಿ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಡ್ರಗ್ ತೆಗೆದುಕೊಂಡಿರೋದಾಗಿ ನಟಿ ರಾಗಿಣಿ ದ್ವಿವೇದಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಗೆಳೆಯ ರವಿಶಂಕರ್ ತಂದುಕೊಟ್ಟಿದ್ದ ಎಂಡಿಎಂಎ ಡ್ರಗ್ ಮನೆಯಲ್ಲಿಯೇ ಬಳಕೆ ಮಾಡಿದ್ದೇನೆ ಎಂದು ರಾಗಿಣಿ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ಬಾರಿಯೂ ರವಿಶಂಕರ್ ಡ್ರಗ್ಸ್ ತಂದಿದ್ದನು. ಇತ್ತ ರಾಗಿಣಿ, ರವಿಶಂಕರ್ ಮತ್ತು ರಾಹುಲ್ ಬಳಸುತ್ತಿದ್ದ ಮೊಬೈಲ್ ಮಾಹಿತಿಯನ್ನ ಪುನಃ ಕಲೆ ಹಾಕಲಾಗಿದೆ. ಎಫ್ಎಸ್ಎಲ್ ವರದಿ ಸಿಸಿಬಿ ಪೊಲೀಸರ ಕೈಗೆ ಸೇರಿದೆ. ಇದನ್ನೂ ಓದಿ: ಸಿಸಿಬಿ ಪಂಜರದಲ್ಲಿ ತುಪ್ಪದ ಬೆಡಗಿ- ಅರೆಸ್ಟ್ ಆದ್ರೂ ಕಮ್ಮಿಯಾಗದ ಚಾರ್ಮಿಂಗ್– ಕಿಟಕಿ ಮೂಲಕ ಫ್ಲೈಯಿಂಗ್ ಕಿಸ್
Advertisement
Advertisement
ರಾಗಿಣಿ ಮದ್ಯದ ಜೊತೆ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಸಿಸಿಬಿ ವಿಚಾರಣೆ ರವಿಶಂಕರ್ ಹೇಳಿಕೆ ಆಧರಿಸಿ ನಟಿಯನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಕರಣ ಸಂಬಂಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್ಐಆರ್ ದಾಖಲಾಗಿದೆ. ಪ್ರಕರಣದಲ್ಲಿ 12 ಜನರನ್ನು ಆರೋಪಿಗಳ ಹೆಸರು ಉಲ್ಲೇಖವಾಗಿದೆ. ರಾಗಿಣಿ ದ್ವಿವೇದಿ ಎರಡನೇ ಆರೋಪಿಯ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಬೆಲ್ಜಿಯಂ ಟು ಬೆಂಗಳೂರು – ಸ್ಯಾಂಡಲ್ವುಡ್ ಡ್ರಗ್ಸ್ ಕಹಾನಿ – ಒಂದು ಮಾತ್ರೆ 1500 ರೂ.ಗೆ ಮಾರಾಟ
Advertisement
Advertisement
12 ಆರೋಪಿಗಳು: ಶಿವಪ್ರಕಾಶ್ (ಎ1), ರಾಗಿಣಿ ದ್ವಿವೇದಿ (ಎ2), ವೀರೇನ್ ಖನ್ನಾ (ಎ3), ಪ್ರಶಾಂತ್ ರಂಕಾ (ಎ4), ವೈಭವ್ ಜೈನ್ (ಎ5), ಆದಿತ್ಯ ಆಳ್ವಾ (ಎ6), ಲೂಮ್ ಪೆಪ್ಪರ್ (ಎ7), ಪ್ರಶಾಂತ್ ರಿಜು (ಎ8), ಅಶ್ವಿನ್ (ಎ9), ಅಭಿ ಸ್ವಾಮಿ (ಎ10), ರಾಹುಲ್ (ಎ11), ವಿನಯ್ (ಎ12)