ಚೆನ್ನೈ: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕಳೆದ ಆಗಸ್ಟ್ 5ರಂದು ಎಸ್ಪಿಬಿ ಅವರಿಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಎಸ್ಪಿಬಿಯವರ ಆರೋಗ್ಯ ಗಂಭೀರವಾಗುತ್ತಿದಂತೆ ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶದ್ಯಾಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ. ಜೊತೆಗೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಹುಷಾರಾಗಲಿ ಎಂದು ಬೇಗ ಗುಣಮುಖರಾಗಿ ಎಸ್ಪಿಬಿ ಸರ್ ಎಂದು ಟ್ಟಿಟ್ಟರ್ ನಲ್ಲಿ ಟ್ರೆಂಡ್ ಮಾಡಲಾಗಿದೆ. ಸೆಲಿಬ್ರಟಿಗಳು ಸೇರಿದಂತೆ ಎಸ್ಪಿಬಿಯವರ ಸಾವಿರಾರು ಅಭಿಮಾನಿಗಳು ಟ್ವೀಟ್ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.
Advertisement
My prayers for our dearest #SPBalasubrahmanyam sir. You will absolutely recover and come back stronger than ever and continue enthralling us again with your soulful sonorous voice.. #GetWellSoonSPBSIR
— Shreya Ghoshal (@shreyaghoshal) August 20, 2020
Advertisement
ಈ ವಿಚಾರವಾಗಿ ಟ್ವೀಟ್ ಮಾಡಿರುವ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಅವರು, ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಗುಣಮುಖರಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅವರು ಗುಣಮುಖರಾಗಿ ಬಂದು ಅವರ ಅದ್ಭುತ ಕಂಠದಿಂದ ನಮ್ಮನ್ನು ರಂಜಿಸಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಜೊತೆಗೆ ತಮಿಳು ನಟ ಕಾರ್ತಿಯವರು ಟ್ವೀಟ್ ಮಾಡಿ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿಕೊಂಡಿದ್ದಾರೆ.
ಕಳೆದ ಶುಕ್ರವಾರವಷ್ಟೇ ಎಸ್ಪಿಬಿ ಆರೋಗ್ಯದಲ್ಲಿ ಭಾರೀ ಏರುಪೇರು ಕಂಡಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು. ನಂತರ ಭಾನುವಾರ ಎಸ್ಪಿಬಿ ಪುತ್ರ ಎಸ್ಪಿ ಚರಣ್ ತಂದೆಯ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿ, ತಂದೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸದ್ಯ ಅವರು ವೆಂಟಿಲೇಟರ್ ಸಹಾಯವಿಲ್ಲದೆ ಉಸಿರಾಡುತ್ತಿದ್ದಾರೆ ಎಂದು ತಿಳಿಸಿದ್ದರು. ಈಗ ಮತ್ತೆ ಇಂದು ಎಸ್ಪಿಬಿಯವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.