ಚೆನ್ನೈ: ಹಿರಿಯ ಗಾಯಕ, ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಲೈಫ್ ಸಪೋರ್ಟ್ ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್ಪಿಬಿ ಅವರ ಚಿಕಿತ್ಸೆ ಮುಂದುವರಿದಿದೆ.
ಎಂಜಿಎಂ ಆಸ್ಪತ್ರೆ ಎಸ್ಪಿಬಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆಗಸ್ಟ್ 5ರಂದು ಎಸ್ಪಿಬಿ ದಾಖಲಾಗಿದ್ದರು. ಎಕ್ಮೋ ಮತ್ತು ಇನ್ನಿತರ ಲೈಫ್ ಸಪೋರ್ಟ್ ಮೇಲೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 24 ಗಂಟೆಯಿಂದ ಎಸ್ಪಿಬಿ ಆರೋಗ್ಯ ಕ್ಷೀಣಿಸುತ್ತಿದ್ದು, ಹೆಚ್ಚು ಲೈಫ್ ಸಪೋರ್ಟ್ ಸಾಧನಗಳನ್ನು ಬಳಕೆ ಮಾಡಲಾಗುತ್ತಿದೆ. ಎಂಜಿಎಂ ಆಸ್ಪತ್ರೆಯ ನುರಿತ ವೈದ್ಯರ ತಂಡ ಎಸ್ಪಿಬಿ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಹೇಳಿದೆ.
Advertisement
Advertisement
ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.
Advertisement
Advertisement
ತಂದೆಯ ಆರೋಗ್ಯ ಸುಧಾರಣೆಯಾಗುತ್ತಿದೆ. ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಸ್ಪತ್ರೆಯಲ್ಲಿ ಆಚರಿಸಿದ್ದಾರೆ. ಈಗ ಆಸ್ಪತ್ರೆಯಲ್ಲೇ ಎಸ್ಪಿಬಿ ಟೆನ್ನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದರು.
ಆಗಸ್ಟ್ 5ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿಪಿಗೆ ಚಿಕಿತ್ಸೆ ನೀಡಿವೆ. ಆಗಸ್ಟ್ 24ರಂದು ಎಸ್ಪಿಬಿ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.