ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ.
Advertisement
ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ ಕುರಿತು ಡಿಕೆಶಿ ನಿನ್ನೆ ನೀಡಿದ್ದ ಹೇಳಿಕೆ ಪ್ರತಿಕ್ರಿಯಿಸಿದ ಮುನಿರತ್ನ, ಡಿಕೆಶಿ ಹೇಳಿದ ಮಾತು ಸತ್ಯ. ಡಿಕೆಶಿ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು ಎಂದರು.
Advertisement
Advertisement
ಅವರು ಇವತ್ತು ಯಾವ ಮಟ್ಟದಲ್ಲಿದ್ದಾರೆ, ನಾನು ಆ ಮಟ್ಟಕ್ಕೆ ತಲುಪಲು ಆಗಲ್ಲ. ದೇವರು ನನಗೆ ಏಳು ಜನ್ಮ ಕೊಟ್ರೂ ಅವರ ಸಮನಾಗಿ ಬರಲು ಸಾಧ್ಯವಿಲ್ಲ. ಡಿಕೆಶಿಯವ್ರಿಗೂ ನನಗೂ ಹೋಲಿಕೆ ಮಾಡಿ ಮಾತಾಡೋದೇ ತಪ್ಪು ಎಂದು ಹೇಳುವ ಮೂಲಕ ಡಿಕೆಶಿ ಹೇಳಿಕೆಗೆ ಮುನಿರತ್ನ ವ್ಯಂಗ್ಯವಾಡಿದರು. ಇದನ್ನೂ ಓದಿ: ವೈರಲ್ ಆಯ್ತು ಡಿಕೆಶಿ ಪ್ರಚಾರದ ವೇಳೆ ಹಿಡಿದ ಆರ್ಸಿಬಿ ಛತ್ರಿ ಫೋಟೋ
Advertisement
ಇದೇ ವೇಳೆ ಆರ್ ಆರ್ ನಗರಕ್ಕೆ ಪ್ಯಾರಾ ಮಿಲಿಟರಿ ಪಡೆ ನಿಯೋಜನೆಗೆ ಒತ್ತಾಯ ವಿಚಾರ ಮಾತನಾಡುತ್ತಾ ಪ್ಯಾರಾ ಮಿಲಿಟರಿ ತುಕಡಿ ನಿಯೋಜನೆ ಕ್ಷೇತ್ರಕ್ಕೆ ಅಗತ್ಯ ಎಂದು ಮತ್ತೆ ಒತ್ತಿ ಹೇಳಿದರು. ಪ್ಯಾರಾ ಮಿಲಿಟರಿ ಫೋರ್ಸ್ ಕರೆಸುವ ಬಗ್ಗೆ ಸಿಎಂ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ಮಾಡಿದ್ದೇನೆ. ಹೀಗಾಗಿ ಪ್ಯಾರಾ ಮಿಲಿಟರಿ ಪಡೆ ಕರೆಸುವ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಮುಂದಿನ ನಿರ್ಧಾರ ತಗೋತಾರೆ. ಪ್ಯಾರಾ ಮಿಲಿಟರಿ ಫೋರ್ಸ್ ಬಂದ್ರೆ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆಯುತ್ತದೆ. ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸುವುದು ಮುಖ್ಯ ಎಂದು ಹೇಳಿದರು.