ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮತ್ತೆ ಜೋರಾಗಿದೆ. ಐಪಿಎಲ್ ಪಂದ್ಯಾವಳಿ ಆರಂಭವಾದ ಬೆನ್ನಲ್ಲೇ ಬೆಟ್ಟಿಂಗ್ ದಂಧೆ ಹೆಚ್ಚಿದ್ದು, ಇಂತಹವರನ್ನು ಪೊಲೀಸರು ಹೆಡೆಮುರಿ ಕಟ್ಟುತ್ತಿದ್ದಾರೆ.
Advertisement
ಹಳೆ ಹುಬ್ಬಳ್ಳಿಯ ಕೆಂಪಗೇರಿಯಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಹಾಗೂ ಸಿಸಿಐಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 6,28,500 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚೇತನಾ ಕಾಲೋನಿ ನಿವಾಸಿ ಧರ್ಮೇಂದ್ರ ಚೌಧರಿ, ಕೇಶ್ವಾಪುರದ ಸದಾನಂದ ಬದ್ದಿ, ಜೆಸಿ ನಗರದ ಪಾರಸಮಲ್ ರಾಠೋಡ ಬಂಧಿತರು. ಪೊಲೀಸರ ಕಣ್ತಪ್ಪಿಸಿ ದಂಧೆ ನಡೆಸುತ್ತಿದ್ದರು. ಆದರೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
Advertisement
ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಹಳೆ ಹುಬ್ಬಳ್ಳಿಯ ಖಾಲಿ ಜಾಗದಲ್ಲಿ ಐಪಿಲ್ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು. ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಹಾಗೂ ಸಿಸಿಐಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ ಬರೋಬ್ಬರಿ 6,28,500 ನಗದನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.