ಬೆಂಗಳೂರು: ಒಂದೇ ಒಂದು ಬೆಡ್ಗಾಗಿ ವ್ಯಕ್ತಿಯೊಬ್ಬರು ಬರೋಬ್ಬರಿ 4 ದಿನ ಅಲೆದಾಟ ನಡೆಸಿದ ಅಮಾನವೀಯ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಹೌದು. ಹೆಬ್ಬಾಳದ ಕೆಂಪಾಪುರದ 35 ವರ್ಷದ ವ್ಯಕ್ತಿ ಕಳೆದ ವಾರದಿಂದ ಹೊಟ್ಟೆನೋವು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದು, ಚಿಕಿತ್ಸೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಅಂಬೇಡ್ಕರ್ ಆಸ್ಪತ್ರೆ, ಜಯನಗರ ರಾಜೀವ್ ಗಾಂಧಿ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆ ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ.
Advertisement
Advertisement
4 ದಿನ, 8 ಆಸ್ಪತ್ರೆ ಹಾಗೂ 400 ಕಿಲೋ ಮೀಟರ್ ಸುತ್ತಾಡಿದರೂ ಚಿಕಿತ್ಸೆ ಸಿಗದೇ ಆಸ್ಪತ್ರೆಯ ಗೇಟಿನ ಮುಂದೆಯೇ ಜೀವನ್ಮರಣದ ಹೋರಾಟ ನಡೆಸುತ್ತಿದ್ದು, ರೋಗಿಯ ವೃದ್ಧೆ ತಾಯಿ ಕಣ್ಣೀರು ಹಾಕಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲೂ ಮಗನಿಗೆ ಚಿಕಿತ್ಸೆ ಸಿಕ್ಕಿಲ್ಲ ಎಂದು ಆಸ್ಪತ್ರೆಯ ಆವರಣದಲ್ಲಿ ವೃದ್ಧೆ ತಾಯಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
Advertisement
Advertisement
ಅಡ್ಮೀಟ್ ಆದರೆ ದಿನಕ್ಕೆ 20 ಸಾವಿರ ಚಾರ್ಜ್ ಆಗುತ್ತೆ ಎಂದು ವೈದ್ಯರು ಹೇಳಿದ್ದು, ಅಷ್ಟೊಂದು ಹಣ ಕಟ್ಟಲಾಗದೇ ಕಣ್ಣೀರು ಹಾಕುತ್ತಾ ಆಸ್ಪತ್ರೆಯ ಮುಂದೆಯೇ ತಾಯಿ-ಮಗ ಕುಳಿತಿದ್ದರು. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಚಿವರು ಚಿಕಿತ್ಸೆಯ ಭರವಸೆ ನೀಡಿದ್ದಾರೆ.
ಒಟ್ಟಿನಲ್ಲಿ ಆಸ್ಪತ್ರೆಯ ಮುಂದೆ ರೋಗಿ ಒದ್ದಾಡುತ್ತಿದ್ದರೂ ದಾಖಲಿಸಿಕೊಳ್ಳದ ಹಾಸ್ಪಿಟಲ್ ಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.