ನವದೆಹಲಿ: ದೇಶದಲ್ಲಿ ಒಂದೇ ದಿನ 88,600 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಸೋಂಕಿತರ ಸಂಖ್ಯೆ 9,56,402ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಕ್ಷಸಿ ಕೊರೊನಾ 1,124 ಸೋಂಕಿತರನ್ನು ಬಲಿ ಪಡೆದುಕೊಂಡಿದ್ದು, ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 94,503ಕ್ಕೆ ಏರಿಕೆ ಆಗಿದೆ. ದೇಶದಲ್ಲಿ 59,92,533 ಕೊರೊನಾ ಪ್ರಕರಣಗಳು ವರದಿಯಾಗಿವೆ. ಸೆಪ್ಟೆಂಬರ್ 2ರಿಂದ ಪ್ರತಿನಿತ್ಯ ದೇಶದಲ್ಲಿ ಕೊರೊನಾದಿಂದಾಗಿ ಒಂದು ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ.
Advertisement
Spike of 88,600 new #COVID19 cases & 1,124 deaths reported in India, in the last 24 hours.
COVID case tally stands at 59,92,533 including 9,56,402 active cases, 49,41,628 cured/discharged/migrated & 94,503 deaths: Ministry of Health & Family Welfare pic.twitter.com/VgZaTigtka
— ANI (@ANI) September 27, 2020
Advertisement
ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಪ್ರಮಾಣ ಶೇ.6.3ರಿಂದ ಶೇ.8.9ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಘಾತಕಾರಿ ಅಂಶವನ್ನು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಇನ್ನು ಗುಣಮುಖ ಪ್ರಮಾಣ ಶೇ.82.1ರಷ್ಟಿದೆ.
Advertisement
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/qwHQE1WY3a
— ICMR (@ICMRDELHI) September 27, 2020
Advertisement
ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದಲೇ ಅತ್ಯಧಿಕ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಐದು ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ 49,176 ಮಂದಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅಂದಾಜು ಒಟ್ಟು ಪ್ರಕರಣಗಳಲ್ಲಿ ಶೇ.55ರಷ್ಟು ಪಾಲು ಈ ಐದು ರಾಜ್ಯಗಳದ್ದಾಗಿದೆ.