ಬೆಂಗಳೂರು: ಬಿಜೆಪಿಯಲ್ಲಿ ಯಾವುದೇ ರೀತಿಯ ಒತ್ತಡ ತಂಡ ನಡೆಯಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಮುರುಗೇಶ್ ನಿರಾಣಿ, ನನ್ನ ವೈಯಕ್ತಿಕ ಭೇಟಿ ಆಗಿತ್ತು. ಬಿಜೆಪಿಯಲ್ಲಿ ಯಾವುದೇ ಒತ್ತಡದ ತಂತ್ರಗಳು ನಡೆಯಲ್ಲ. ಮಾಧ್ಯಮದಲ್ಲಿ ಬರುತ್ತಿರುವ ವಿಷಯ ಸತ್ಯಕ್ಕೆ ದೂರವಾದದ್ದು. ನಾನೊಬ್ಬ ಆರ್ಎಸ್ಎಸ್ ಕಟ್ಟಾಳು. ಆರ್ಎಸ್ಎಸ್ ಜೊತೆಗೆ ಕಳೆದ 30 ವರ್ಷದಿಂದ ಸಂಬಂಧವಿದೆ. ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಿರೋದರಿಂದ ರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ನಾಯಕರು ಸಂಪರ್ಕದಲ್ಲಿದ್ದಾರೆ ಎಂದರು.
Advertisement
Advertisement
ಹೈಕಮಾಂಡ್ಗೆ ಒಂದೂವರೆ ಸಾವಿರ ಕೋಟಿ ಹಣ ನೀಡಿ ಮುರಗೇಶ್ ನಿರಾಣಿ ಸಿಎಂ ಆಗ್ತಾರಾ ಅನ್ನೋ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ನಾನೊಬ್ಬ ರೈತನ ಮಗ. ನಾನು ಕಾರ್ಮಿಕರಿಗೆ ಸಂಬಳ ನೀಡಿಕೊಂಡು ಬಂದಿದ್ದೇನೆ. ಸಾವಿರ ಕೋಟಿ ಕೊಟ್ಟು ಸಿಎಂ ಅಗುವದೆಲ್ಲ ಸತ್ಯಕ್ಕೆ ದೂರವಾದ ವಿಷಯ. ವಿಜಯೆಂದ್ರ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆ ಆದಾಗ ಅವರಿಗೆ ಅಭಿನಂದನೆ ಸಲ್ಲಿಸಿದ್ದ ಫೋಟೋ ಒಂದು ವೈರಲ್ ಮಾಡಲಾಗಿದೆ. ಬಿಜೆಪಿಯಲ್ಲಿ ಹಣ ತಗೆದುಕೊಳ್ಳೊದು ಕೊಡೋದು ಸಂಸ್ಕೃತಿ ಇಲ್ಲ. ಸಿಎಂ ಯಾರು ಅಗ್ತಾರೆ ಅನ್ನೋದು ಗೊತ್ತಿಲ್ಲ ಎಂದು ಹೇಳಿದರು.
Advertisement
Advertisement
ರಾಜ್ಯಕ್ಕೆ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ನಿಯೋಗ ಬರುತ್ತಿದೆ. ಅವರು ಬಿಎಸ್ವೈ ಸೇರಿದಂತೆ ಶಾಸಕರ ಒಲವು ನೋಡಿಕೊಂಡು ಸಿಎಂ ಆಯ್ಕೆ ಮಾಡ್ತಾರೆ. ನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಯಾರ ಅಪಾಯಿಂಟ್ಮೆಂಟ್ ಕೂಡ ಪಡೆದಿರಲಿಲ್ಲ. ನಾನು ಸಿಎಂ ಮಾಡುವಂತೆ ಯಾರ ಬಳಿ ಲಾಬಿಯೂ ಮಾಡಿಲ್ಲ. ಬಿಜೆಪಿಯಲ್ಲಿ ಆ ಪ್ರವೃತ್ತಿ ಇಲ್ಲ ಎಂದು ಮುರಗೇಶ್ ನಿರಾಣಿ ತಿಳಿಸಿದರು. ಇದನ್ನೂ ಓದಿ: ದೆಹಲಿಯಿಂದ ಒತ್ತಡ ಇಲ್ಲ, ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ: ಬಿಎಸ್ವೈ
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮುಂದಿನ ಸಿಎಂ ಪಟ್ಟಕ್ಕಾಗಿ ದೊಡ್ಡಮಟ್ಟದಲ್ಲಿ ಲಾಬಿ ಮಾಡಲಾಗುತ್ತಿದೆ. ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಚಿವ ಮುರಗೇಶ್ ನಿರಾಣಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡಲಾಗುತ್ತಿದ್ದಾರೆ ಏನ್ನಲಾಗಿದೆ. ಆ ಕಾರಣಕ್ಕೆ ಮುರಗೇಶ್ ನಿರಾಣಿ ಬಿಎಸ್ವೈ ರಾಜಿನಾಮೆ ಕೊಡುತ್ತಿದ್ದಂತೆ ಹೈಕಮಾಂಡ್ ನಾಯಕರ ಭೇಟಿಗೆ ಹೋಗಿದ್ದರು ಏನ್ನಲಾಗಿದೆ. ಇದನ್ನೂ ಓದಿ: ಯಡಿಯೂರಪ್ಪ ಸಂಪುಟ ವಿಸರ್ಜನೆ – ಸಚಿವರೆಲ್ಲ ಮಾಜಿ
ಸೋಮವಾರ ಸರ್ಕಾರ ಎರಡನೇ ವರ್ಷದ ಸಂಭ್ರಮಾಚರಣೆ ವೇದಿಕೆಯಲ್ಲಿ ಯಡಿಯೂರಪ್ಪನವರು ರಾಜೀನಾಮೆ ನೀಡುವದಾಗಿ ಘೋಷಣೆ ಮಾಡಿದ್ದರು. ತಮ್ಮ ಭಾಷಣದ ವೇಳೆ ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ನೆನೆದು ಭಾವುಕರಾಗಿ ಕಣ್ಣೀರಿಟ್ಟಿದ್ದರು. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿ, ಮುಂದೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವದಾಗಿ ತಿಳಿಸಿದರು. ಇದೇ ವೇಳೆ ರಾಜೀನಾಮೆಗೆ ದೆಹಲಿಯಿಂದ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸ್ವಪ್ರೇರಣೆಯಿಂದ ಸಿಎಂ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಬಿಎಸ್ವೈ ರಾಜೀನಾಮೆ – ಯೋಗೇಶ್ವರ್, ಯತ್ನಾಳ್ ಭಾವಚಿತ್ರ ದಹಿಸಿ ಆಕ್ರೋಶ