ಮುಂಬೈ: 2020ರ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಹೊಸ ಚಿಂತನೆಯನ್ನು ನಡೆಸಿದೆ. ಕೊರೊನಾ ಕಾರಣದಿಂದ ಮಾರ್ಚ್ 29ರಂದು ಆರಂಭವಾಗಬೇಕಿದ್ದ ಟೂರ್ನಿಯನ್ನು ಮುಂದೂಡಲಾಗಿತ್ತು. ಸದ್ಯ ಅಕ್ಟೋಬರ್-ನವೆಂಬರಿನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ ಮುಂದೂಡುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಹೊಸ ಪ್ಲಾನ್ ಸಿದ್ಧಪಡಿಸಿದೆ.
Advertisement
ಭಾರತದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿರುವುದರಿಂದ ಐಪಿಎಲ್ ಟೂರ್ನಿಯನ್ನು ಒಂದೇ ನಗರದಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿರುವುದಾಗಿ ವರದಿಯಾಗಿದೆ. ಬಿಸಿಸಿಐ ಚಿಂತನೆಯ ಅನ್ವಯ ಒಂದು ನಗರ, ಒಂದು ಕ್ರೀಡಾಕೂಟ ಪ್ಲಾನ್ ಅಡಿ ಮುಂಬೈ ನಗರದಲ್ಲಿ ಟೂರ್ನಿ ಆಯೋಜಿಸಲು ಹಲವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ವಾಂಖೆಡೆ, ಬ್ರಬೋರ್ನ್ ಮತ್ತು ಡಿವೈ ಪಾಟೀಲ್ ಕ್ರೀಡಾಂಗಣಗಳು ಹಾಗೂ ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಹೋಟೆಲ್ಗಳು ಲಭ್ಯವಿದೆ. ಪರಿಣಾಮ ಕ್ರೀಡಾಂಗಣಕ್ಕೆ ಪ್ರೇಕ್ಷಕರಿಗೆ ಅನುಮತಿ ನೀಡದೆ ಬಯೋ ಸೆಕ್ಯೂರ್ ವಾತಾವರಣದಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.
Advertisement
Advertisement
ಭಾರತದಲ್ಲಿ ಬುಧವಾರ ರಾತ್ರಿ ವೇಳೆಗೆ ಕೊರೊನಾ ಪ್ರಕರಣಗಳು 6 ಲಕ್ಷವನ್ನು ದಾಡಿದ್ದು, ಮಹಾರಾಷ್ಟ್ರ ಒಂದರಲ್ಲೇ ಸುಮಾರು 1.80 ಲಕ್ಷ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲೂ ಮುಂಬೈ ನಗರ ಒಂದರಲ್ಲೇ 70 ಸಾವಿಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದೆ. ಆದರೆ ಟೂರ್ನಿಗೆ ಮತ್ತಷ್ಟು ಸಮಯದ ಕಾಲಾವಕಾಶ ಇರುವುದರಿಂದ ಬಯೋ ಸೆಕ್ಯೂರ್ ವಾತಾವರಣದಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ಹೊಸ ಪ್ಲಾನ್ ಸಿದ್ಧಪಡಿಸಿದೆ ಎನ್ನಲಾಗಿದೆ. ಸದ್ಯ ಬಿಸಿಸಿಐ ಟಿ20 ವಿಶ್ವಕಪ್ ಕುರಿತು ಐಸಿಸಿ ತೆಗೆದುಕೊಳ್ಳುವ ನಿರ್ಣಯದ ಕುರಿತು ಎದುರು ನೋಡುತ್ತಿದೆ.