BelgaumDistrictsKarnatakaLatestMain Post

 ಕಂಟೇನರ್​ಗೆ ಲಾರಿ ಡಿಕ್ಕಿ – ಇಬ್ಬರ ದುರ್ಮರಣ

ಬೆಳಗಾವಿ: ಕಂಟೇನರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೀರಜ್ ಹಾಗೂ ರಾಜೇಂದ್ರ ಎಂಬ ಇಬ್ಬರು ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಂಟೇನರ್ ನ ಮೇಲ್ಭಾಗ ಕಿತ್ತು ಬಿದ್ದು, ಔಷಧಿ ತುಂಬಿಕೊಂಡು ನಿಂತಿದ್ದ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಶೀಲ್ದಾರ್

Leave a Reply

Your email address will not be published. Required fields are marked *

Back to top button