– ಪ್ರವಾಸೋದ್ಯಮ ಇಲಾಖೆಯಿಂದ ಉಡುಗೊರೆ
ಮಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
Advertisement
ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ 5 ಲಕ್ಷ ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷಗಳಂತೆ ಒಟ್ಟು 50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷಗಳಂತೆ ಒಟ್ಟು 50 ಲಕ್ಷ ಸೇರಿ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
Advertisement
Advertisement
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ್ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಗುರುವಾರ ಹೊರಡಿಸಿದೆ.
Advertisement
ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸಲು ರಾಜ್ಯ ಬಿಜೆಪಿ ಸರ್ಕಾರ ರೂ. 1 ಕೋಟಿ ಸಹಾಯಧನ ಬಿಡುಗಡೆ ಮಾಡಿದೆ.
ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಯ ತಲಾ 10 ಕಂಬಳ ನಡೆಸಲು ತಲಾ ರೂ. 5 ಲಕ್ಷ ಬಿಡುಗಡೆ ಮಾಡಿದೆ.
ಈ ನೆಲದ ಆಚಾರ ವಿಚಾರ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಲು ಬಿಜೆಪಿ ಪಕ್ಷವು ಬದ್ಧವಾಗಿದೆ.#Kambala#Kambula pic.twitter.com/m3ROT0jzxg
— BJP Karnataka (@BJP4Karnataka) March 19, 2021