ಬೆಂಗಳೂರು: ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ರದ್ದು ಮಾಡಿದರೂ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬಹು ಆಯ್ಕೆಯ ಪ್ರಶ್ನೆ ಇರುತ್ತದೆ. ಈ ಪರೀಕ್ಷೆಯಲ್ಲಿ ಯಾರನ್ನು ಫೇಲ್ ಮಾಡುವುದಿಲ್ಲ. ಗ್ರೇಡ್ ಮಾದರಿಯಲ್ಲಿ 2 ದಿನ ಪರೀಕ್ಷೆ ನಡೆಯುತ್ತದೆ. ಜುಲೈ 3 ನೇ ವಾರದಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಸುರೇಶ್ ಕುಮಾರ್
Advertisement
ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯದೇ ಹೋದ್ರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡುತ್ತೇವೆ. ಪರೀಕ್ಷೆಗೆ 20 ದಿನ ಮುನ್ನ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ : ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು
Advertisement