ಚಿಕ್ಕಬಳ್ಳಾಪುರ: ತಮ್ಮ ಆರ್ಆರ್ ನಗರದ ಅಭ್ಯರ್ಥಿ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್ಐಆರ್ ದಾಖಲಾಗಿದ್ದಕ್ಕೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಚಿವ ಸುಧಾಕರ್ ಟಾಂಗ್ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಅಧಿಕಾರಿಗಳು ಕಾನೂನು ರೀತಿಯ ಕ್ರಮ ಕೈಗೊಳ್ತಾರೆ. ಆದರೆ ಕಾಂಗ್ರೆಸ್ಸಿಗರಿಗೆ ಅಂತಾನೇ ಏನಾದ್ರೂ ವಿಶೇಷ ಕಾನೂನು ಮಾಡಬೇಕಾ? ಕಾಂಗ್ರೆಸ್ಸಿಗರು ಕಾನೂನಿಗಿಂತ ದೊಡ್ಡವರಾ ಎಂದು ಪ್ರಶ್ನೆ ಮಾಡಿದ್ರು.
Advertisement
Advertisement
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿಎಂ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ರಾಜ್ಯದ ಪ್ರತಿಯೊಬ್ಬರಿಗೂ ಅತ್ಯತ್ತಮ ವೈದ್ಯಕೀಯ ಸೇವೆ ದೊರೆಯಬೇಕು. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ಬರುವಂತೆ ಮಾಡುವುದೇ ನನ್ನ ಗುರಿ. ಕೋವಿಡ್ ನಿಯಂತ್ರಣದ ಜೊತೆ ಸಾವಿನ ಪ್ರಮಾಣ ಕಡಿಮೆ ಮಾಡುತ್ತೇವೆ ಎಂದರು.
Advertisement
ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿ ಪರವಿದ್ದು, ಆರ್ಆರ್ನಗರ ಹಾಗೂ ಶಿರಾ ವಿಧಾನಸಭೆ ಉಪಚುನಾವಣೆಗಳು ಹಾಗೂ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಅಂತ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
Advertisement
ನಿನ್ನೆ ತಾನೇ ತೋಟಗಾರಿಕಾ ಇಲಾಖಾ ಸಚಿವ ನಾರಾಯಣಗೌಡ ನಂದಿಗಿರಿಧಾಮಕ್ಕೆ ಭೇಟಿ ನೀಡಿ, ನಂದಿಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ಬಿಟ್ಟು ಕೊಡುವ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿದ್ರು. ಆದರೆ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ.ಕೆ.ಸುಧಾಕರ್, ಗಿರಿಧಾಮದ ಅಭಿವೃದ್ದಿಗೆ ಯಾವ ಇಲಾಖೆಯಾದ್ರು ಏನಂತೆ, ಗಿರಿಧಾಮದ ಪ್ರಕೃತಿ ಸೊಬಗಿಗೆ ಧಕ್ಕೆಯಾಗದ ಹಾಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದರು. ಈ ಮೂಲಕ ಪರೋಕ್ಷವಾಗಿ ಸಚಿವರು ತೋಟಗಾರಿಕಾ ಇಲಾಖೆ ಅಧೀನದ ನಂದಿಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ಬಿಟ್ಟು ಕೊಡುವ ಸುಳಿವು ನೀಡಿದಂತಿತ್ತು. ಈ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ನವರ ತೀರ್ಮಾನವೇ ಅಂತಿಮ ಎಂದರು.